ದರ್ಶನ್ ಪಕ್ಷ ನೋಡಲ್ಲ, ವ್ಯಕ್ತಿ ನೋಡಿ ಪ್ರಚಾರಕ್ಕೆ ಹೋಗುತ್ತಾರೆ: ಸುಮಲತಾ ಅಂಬರೀಶ್
ದರ್ಶನ್ ಅವರು ಪಕ್ಷ ನೋಡಿ ಪ್ರಚಾರ ಮಾಡಲ್ಲ. ವ್ಯಕ್ತಿ ನೋಡಿ ಪ್ರಚಾರಕ್ಕೆ ಹೋಗುತ್ತಾನೆ. ಇನ್ನು ರಾಜಕೀಯವಾಗಿ ನಾನು ಪ್ರತಿದಿನ ಫೋನು ಮಾಡಿ ನೀನು ಎಲ್ಲಿಗೆ ಹೋಗುತ್ತಿದ್ದೀಯ? ಯಾರ ಪರ ಪ್ರಚಾರ ಮಾಡುತ್ತಿದ್ದೀಯಾ? ಎಂದು ಕೇಳುವುದಿಲ್ಲ ಎಂದರು.
ಈ ಹಿಂದೆ ವಿಧಾನಸಭೆ ಚುನಾವಣೆಯಲ್ಲಿ ದರ್ಶನ್ ಮದ್ದೂರಿನಲ್ಲಿ ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದರು. ಹಾಗೇ ಶ್ರೀರಂಗಪಟ್ಟಣದಲ್ಲಿ ಬಿಜೆಪಿ ಪರ ಪ್ರಚಾರ ಮಾಡಿದ್ದರು. ಪಾಂಡವಪುರದಲ್ಲಿ ದರ್ಶನ್ ಪುಟ್ಟಣ್ಣಯ್ಯ ಪರ ಪ್ರಚಾರಕ್ಕೆ ಹೋಗಿದ್ದರು. ಪಕ್ಷ ಮುಖ್ಯ ಅಲ್ಲ. ನಿಂತಿರುವ ವ್ಯಕ್ತಿ ಮುಖ್ಯ ಎಂದು ದರ್ಶನ್ ಹೇಳುತ್ತಾ ಬಂದಿದ್ದಾರೆ ಎಂದು ಸುಮಲತಾ ಅಂಬರೀಶ್ ತಿಳಿಸಿದರು.