ಸಂಕಷ್ಟದಲ್ಲಿ ದರ್ಶನ್ ಪತ್ನಿ ವಿಜಯಲಕ್ಷ್ಮೀ, ಏನಿದು ಪ್ರಕರಣ ಗೊತ್ತಾ
ಕಾನೂನು ಬಾಹಿರವಾಗಿ ವಿಶಿಷ್ಟ ಜಾತಿಯ ಬಾರ್ ಹೆಡೆಡ್ ಗೂಸ್ ಬಾತುಕೋಳಿಯನ್ನು ಸಾಕಿದ್ದಾರೆಂಬ ಆರೋಪದಲ್ಲಿ ಈ ಪಕ್ಷಿಯನ್ನು ವಶಕ್ಕೆ ಪಡೆದಿದ್ದ ಅರಣ್ಯ ಇಲಾಖೆ ಎಫ್ಐಆರ್ ದಾಖಲಿಸಿದರು.
ದರ್ಶನ್ ಸೇರಿದಂತೆ ಸಂಬಂಧಪಟ್ಟವರಿಗೆ ವಿಚಾರಣೆಗೆ ಬರುವಂತೆ ನೋಟಿಸ್ ನೀಡಲಾಗಿತ್ತು. ಹಲವು ಬಾರಿ ನೋಟಿಸ್ ನೀಡಿದರೂ ವಿಚಾರಣೆಗೆ ದರ್ಶನ್ ಹಾಜರಾಗದಿದ್ದಕ್ಕೆ ಇದೀಗ ದರ್ಶನ್ ವಿರುದ್ಧ ಚಾರ್ಜ್ಶೀಟ್ ಸಲ್ಲಿಸಲು ಅರಣ್ಯ ಇಲಾಖೆ ನಿರ್ಧಾರ ಮಾಡಿದೆ ಎಂದು ತಿಳಿದುಬಂದಿದೆ. ಹೀಗಾಗಿ ದರ್ಶನ್ ಮತ್ತು ಪತ್ನಿ ವಿಜಯಲಕ್ಷ್ಮೀಗೆ ಸಂಕಷ್ಟ ಎದುರಾಗಿದೆ.