ಶ್ರೀರಂಗಪಟ್ಟಣದಲ್ಲಿ ದಸರಾ ಮಹೋತ್ಸವ ವೈಭವ

ಗುರುವಾರ, 12 ಸೆಪ್ಟಂಬರ್ 2019 (14:58 IST)
ಐತಿಹಾಸಿಕ ಹಿನ್ನೆಲೆ ಇರುವ ಶ್ರೀರಂಗಪಟ್ಟಣ ದಸರಾ ಮಹೋತ್ಸವನ್ನು ಕಳೆದ ಬಾರಿಯಂತೆ ಈ ಬಾರಿಯೂ ಸಡಗರ ಹಾಗೂ ವಿಜೃಂಜಭಣೆಯಿಂದ ಆಚರಣೆ ಮಾಡಲು ಸಿದ್ಧತೆಗಳು ಶುರುವಾಗಿವೆ.

ದಸರಾವನ್ನು ವ್ಯವಸ್ಥಿತವಾಗಿ ಆಯೋಜಿಸಲಾಗುತ್ತಿದ್ದು ಎಲ್ಲರೂ ಸಹಕಾರ ನೀಡಬೇಕು ಎಂದು ಶ್ರಿರಂಗಪಟ್ಟಣದ ಶಾಸಕರಾದ ರವೀಂದ್ರ ಶ್ರಿಕಂಠಯ್ಯ ಕೋರಿದ್ದಾರೆ.

ಈ ಬಾರಿಯ ಶ್ರೀರಂಗಪಟ್ಟಣ ದಸರಾವನ್ನು ಮೂರು ದಿನಗಳ ಕಾಲ ಆಚರಿಸಲಾಗುತ್ತಿದ್ದು, ಆಚರಣೆಯಲ್ಲಿ ಲೋಪದೋಷಕ್ಕೆ ಅವಕಾಶ ನೀಡದೆ ಅಧಿಕಾರಿಗಳು ಕಾರ್ಯಕ್ರಮದ ಯಶಸ್ಸಿಗೆ ಒಟ್ಟಾಗಿ ಶ್ರಮಿಸಬೇಕು.

ಶ್ರೀರಂಗಪಟ್ಟಣ ದಸರಾ ಮಹೋತ್ಸವದ ಕಾರ್ಯಕ್ರಮದಲ್ಲಿ ದಸರಾ ಮೆರವಣಿಗೆಯನ್ನು ಮತ್ತಷ್ಟು ವೈಭವಿಕರಿಸಲು ಕಲಾತಂಡಗಳ ಜೊತೆಗೆ ಕೃಷಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸೇರಿದಂತೆ ಹಲವು
ಇಲಾಖೆಗಳಿಂದ ಸ್ತಬ್ಧಚಿತ್ರವನ್ನು ಉತ್ತಮವಾಗಿ ಸಿದ್ಧಪಡಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ಕ್ರಮವಹಿಸಬೇಕು ಅಂತ ಹೇಳಿದ್ರು.

ಶ್ರೀರಂಗಪಟ್ಟಣ ತಾಲ್ಲೂಕಿನ ಕಿರಂಗೂರು ಗ್ರಾಮದಲ್ಲಿರುವ ಬನ್ನಿಮಂಟಪದಲ್ಲಿ ನಾಡದೇವತೆ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸಿದ ನಂತರ ಮೆರವಣಿಗೆಗೆ ಚಾಲನೆ ನೀಡಲಾಗುವುದು.

ಮೈಸೂರು ದಸರಾಕ್ಕೆ ಆಗಮಿಸಿರುವ ಆನೆಗಳನ್ನು ಕರೆತಂದು, ಜಂಬೂ ಸಾವರಿಯನ್ನು ಆಯೋಜನೆ ಮಾಡಲಾಗುವುದು ಎಂದರು.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ