ದಶಪಥ ಹೆದ್ದಾರಿಯ ಟೋಲ್ ಸಂಗ್ರಹ : ಹೀಗಿರಲಿದೆ ಟೋಲ್ ದರ!

ಸೋಮವಾರ, 27 ಫೆಬ್ರವರಿ 2023 (07:52 IST)
ದಶಪಥ ಹೆದ್ದಾರಿಯ ಮೊದಲ ಹಂತದ 55.63 ಕಿ.ಮೀ ರಸ್ತೆಗೆ ಶುಲ್ಕ ವಸೂಲಿ ಮಾಡಲು ನಿರ್ಧಾರ ಮಾಡಲಾಗಿದೆ. ಹಾಗಾಗಿ ವಿವಿಧ ಮಾದರಿಯ ವಾಹನಗಳಿಗೆ ಪ್ರತ್ಯೇಕ ದರ ನಿಗದಿಪಡಿಸಲಾಗಿದೆ.
 
ಸರ್ವೀಸ್ ರಸ್ತೆ ಹೊರತುಪಡಿಸಿ, ಉಳಿದ ಆರು ಪಥಗಳಿಗೆ ಶುಲ್ಕ ಅನ್ವಯವಾಗಲಿದೆ.  ಕಾರು, ಜೀಪು, ವ್ಯಾನುಗಳಿಗೆ ಏಕಮುಖ ಸಂಚಾರಕ್ಕೆ 135 ರೂ. ನಿಗದಿ ಪಡಿಸಲಾಗಿದೆ.

ಅದೇ ದಿನ ಮರು ಸಂಚಾರಕ್ಕೆ 205 ರೂ., ಸ್ಥಳೀಯ ವಾಹನಗಳಿಗೆ 70 ರೂ. ಒಂದು ತಿಂಗಳ 50 ಬಾರಿ ಏಕಮುಖ ಸಂಚಾರದ ಪಾಸ್ಗೆ 4,525 ರೂ. ದರ ನಿಗದಿ ಮಾಡಲಾಗಿದೆ.

ಲಘು ವಾಣಿಜ್ಯ ವಾಹನಗಳು ಮತ್ತು ಲಘು ಸರಕು ವಾಹನಗಳ ಮಿನಿ ಬಸ್ಗಳಿಗೆ ಏಕಮುಖ ಸಂಚಾರಕ್ಕೆ 220 ರೂ. ನಿಗದಿ ಪಡಿಸಲಾಗಿದ್ದು, ಅದೇ ದಿನ ಮರು ಸಂಚಾರಕ್ಕೆ 320 ರೂ., ಸ್ಥಳೀಯ ವಾಹನಗಳಿಗೆ 110 ರೂ. ಹಾಗೂ ಒಂದು ತಿಂಗಳ 50 ಬಾರಿ ಏಕಮುಖ ಸಂಚಾರದ ಪಾಸ್ಗೆ 7,315 ರೂ. ದರ ನಿಗದಿ.

ಭಾರಿ ನಿರ್ಮಾಣ ಯಂತ್ರ, ಭೂ ಅಗೆತ ಸಾಧನ, ಬಹು ಆಕ್ಸೆಲ್ ವಾಹನ (6ರಿಂದ 8 ಆಕ್ಸೆಲ್) ಏಕಮುಖ ಸಂಚಾರಕ್ಕೆ 720 ರೂ. ನಿಗದಿ ಮಾಡಲಾಗಿದೆ. ಜೊತೆಗೆ ಅದೇ ದಿನ ಮರು ಸಂಚಾರಕ್ಕೆ 1,080 ರೂ. ಸ್ಥಳೀಯ ವಾಹನಗಳಿಗೆ 360ರೂ. ಒಂದು ತಿಂಗಳ 50 ಏಕಮುಖ ಸಂಚಾರದ ಪಾಸ್ಗೆ 24,030 ರೂ. ದರ ನಿಗದಿಗೊಳಿಸಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ