ಮೈಸೂರು ಜಿಲ್ಲೆಯ ವರುಣಾ ಕ್ಷೇತ್ರದಲ್ಲಿ ಮೊಟ್ಟಮೊದಲ ಬಾರಿಗೆ ಸಿದ್ದರಾಮಯ್ಯ ಕುಟುಂಬದಿಂದ ಮಹಿಳೆಯರು ಪ್ರಚಾರಕ್ಕಿಳಿದಿದ್ದಾರೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಪರ ಅವರ ಸೊಸೆ ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ವರುಣಾ ಕ್ಷೇತ್ರದ ತಾಯೂರು ಗ್ರಾಮ ಪಂಚಾಯ್ತಿಯಲ್ಲಿ ಅಬ್ಬರದ ಪ್ರಚಾರ ನಡೆಸಿರುವ ಸೊಸೆ ಸ್ಮಿತಾ ರಾಕೇಶ್ ಸಿದ್ದರಾಮಯ್ಯ ಅವರು, ಮನೆ ಮನೆಗೆ ತೆರಳಿ ಮತಯಾಚಿಸಿದ್ದಾರೆ. ಇದೇ ವೇಳೆ ಈ ಬಾರಿ ಅತಿಹೆಚ್ಚು ಮತಗಳಿಂದ ಮಾವನವರನ್ನ ಗೆಲ್ಲಿಸಿಕೊಡಿ ಎಂದು ಮನವಿ ಮಾಡಿದ್ದಾರೆ.