ದೇಶದಲ್ಲಿ ಕೊರೊನಾಗೆ ಮೊದಲ ಬಲಿಯಾದವನ ಮಗಳು ಆಸ್ಪತ್ರೆಯಿಂದ ಬಿಡುಗಡೆ
ದೇಶದಲ್ಲಿ ಕೊರೊನಾ ವೈರಸ್ ನಿಂದ ಮೊದಲನೇಯದಾಗಿ ಮೃತಪಟ್ಟಿರುವ ವೃದ್ಧನ ಮಗಳನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.
ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದರಿಂದಾಗಿ ವೃದ್ಧನ ಮಗಳನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಶರತ್ ಬಿ. ತಿಳಿಸಿದ್ದಾರೆ.
ತೀವ್ರ ನಿಗಾದಲ್ಲಿಟ್ಟ ಬಳಿಕ ಚಿಕಿತ್ಸೆ ಕೊಡಲಾಗುತ್ತಿತ್ತು. ಚಿಕಿತ್ಸೆಯ 14 ದಿನಗಳ ಬಳಿಕ ಮಹಿಳೆಯಲ್ಲಿ ಕೋವಿಡ್ – 19 ಪರೀಕ್ಷೆ ಮಾಡಿದಾಗ ನೆಗಟಿವ್ ವರದಿ ಬಂದಿದೆ. 24 ಗಂಟೆಗಳ ಬಳಿಕ ಮತ್ತೊಮ್ಮೆ ಪರೀಕ್ಷೆ ಮಾಡಿದಾಗಲೂ ನೆಗಟಿವ್ ವರದಿ ಬಂದ ಹಿನ್ನೆಲೆಯಲ್ಲಿ ಆಸ್ಪತ್ರೆಯಿಂದ ಮಹಿಳೆಯನ್ನು ಬಿಡುಗಡೆಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.