ದಾವಣಗೆರೆ ಗಣೇಶ ಮೆರವಣಿಗೆ ಗಲಾಟೆ ಪ್ರಕರಣ: 48ಮಂದಿಗೆ ಬಿಗ್ ರಿಲೀಫ್

Sampriya

ಬುಧವಾರ, 16 ಅಕ್ಟೋಬರ್ 2024 (21:10 IST)
Photo Courtesy X
ದಾವಣಗೆರೆ: ಸೆಪ್ಟೆಂಬರ್‌ 19ರಂದು ದಾವಣಗೆರೆಯಲ್ಲಿ ಸರ್ಕಲ್‌ವೊಂದರ ಬಳಿ ನಡೆದಿದ್ದ ಕಲ್ಲು ತೂರಾಟ ಪ್ರಕರಣದಲ್ಲಿ ಹಿಂದೂ ಮುಸ್ಲಿಂ ಸಮುದಾಯಗಳ ಒಟ್ಟು 48 ಮಂದಿ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದರು.

ಅರಳಿ ಮರ ಸರ್ಕಲ್‌ನಲ್ಲಿ ಗಣೇಶ ವಿಸರ್ಜನೆಗೂ ಮುನ್ನಾ ಅಜಾದ್ ನಗರದ ಮುಖ್ಯ ರಸ್ತೆಯಲ್ಲಿ ಮೊದಲು ಕಲ್ಲು ತೂರಾಟ ನಡೆದಿದೆ. ಮೊದಲು ಕಲ್ಲು ತೂರಾಟ ನಡೆದಿತ್ತು. ಇದರಿಂದ ಪೊಲೀಸ್‌ ಅಧಿಕಾರಿಗಳು ಕೂಡ ಗಂಭೀರ ಗಾಯಗೊಂಡಿದ್ದರು.

ಇದೇ ರೀತಿ ಮೂರು ಕಡೆಗಳಲ್ಲಿ ಕಲ್ಲು ತೂರಾಟ ನಡೆದು,  ಬಳಿಕ ಎಚ್ಚೆತ್ತುಕೊಂಡಿದ್ದ ಪೊಲೀಸರು ನಗರವಿಡೀ ಸಂಚರಿಸಿ, ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದರು. ಕಲ್ಲು ತೂರಾಟದ ಕೇಸ್‌ನಲ್ಲಿ ಆರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿತ್ತು. ಪ್ರಕರಣದಡಿಯಲ್ಲಿ ಹಿಂದೂ ಹಾಗೂ ಮುಸ್ಲಿಂ ಸಮುದಾಯಗಳ ನವಲತ್ತಕ್ಕೂ ಹೆಚ್ಚು ಮಂದಿಯನ್ನು ಅರೆಸ್ಟ್‌ ಮಾಡಲಾಗಿತ್ತು.

ಸೆಪ್ಟೆಂಬರ್ 19ರಂದು ಸಂಜೆ‌ ದಾವಣಗೆರೆ ನಗರದ ಮುದ್ದ ಬೋವಿ ಕಾಲೋನಿ ಹಾಗೂ ವೆಂಕಬೋವಿ ಕಾಲೋನಿಯ ಗಣೇಶನನ್ನು ನಗರದ ಅರಳಿ ಮರ ಸರ್ಕಲ್‌ನಲ್ಲಿ ಮೆರವಣಿಗೆ ಮಾಡುವಾಗ ಕಲ್ಲು ತೂರಾಟ ನಡೆದಿತ್ತು. ಈ ವೇಳೆ ಸರ್ಕಲ್ ಇನ್ಸ್‌ಪೆಕ್ಟರ್ ಗುರುಬಸವರಾಜ್ ಹಾಗೂ ಕ್ರೈಂ ವಿಭಾಗದ ಪೊಲೀಸ್ ಕಾನ್ಸ್‌ಸ್ಟೇಬಲ್ ರಘು ಎಂಬುವವರಿಗೆ ಗಾಯಗಳಾಗಿತ್ತು.

45ಕ್ಕೂ ಅಧಿಕ ಮಂದಿ ವಿರುದ್ಧ ದಾಖಲಾದ ಪ್ರಕರಣದಲ್ಲಿ ಆರೋಪಿಗಳು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಇನ್ನು ಗಲಭೆ ಸಂಬಂಧ ಪ್ರಚೋದನಕಾರಿ ಹೇಳಿಕೆ ನೀಡಿದ್ದ ಹಿಂದೂ ಜಾಗರಣಾ ವೇದಿಕೆಯ ಸಂಚಾಲಕ ಸತೀಶ್ ಪೂಜಾರಿಗೂ ಜಾಮೀನು ಸಿಕ್ಕಿದ್ದು, ಇಂದು ಅದ್ಧೂರಿಯಾಗಿ ಸ್ವಾಗತಿಸಲಾಗಿದೆ ಎಂದು ತಿಳಿದುಬಂದಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ