ಪ್ರವಾಹ ಸಂತ್ರಸ್ತರಿಗೆ ಮನೆ ನಿರ್ಮಿಸಲು ಬಿಡುಗಡೆ ಮಾಡಲಾಗಿರುವ ಮೊದಲ ಕಂತಿನ ಹಣದಲ್ಲಿ ಕೆಲವರು ಕಮಿಷನ್ ಪಡೆಯುತ್ತಿದ್ದಾರೆ ಎಂಬ ದೂರುಗಳು ಕೇಳಿಬರುತ್ತಿವೆ.
ಸಂತ್ರಸ್ತರ ಪರಿಹಾರ ಹಣದಲ್ಲಿ ಯಾರಾದರೂ ಕಮಿಷನ್ ಕೇಳಿರುವುದು ಕಂಡುಬಂದರೆ ಅಂತಹವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು. ಹೀಗಂತ ಬೆಳಗಾವಿ ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಎಚ್ಚರಿಕೆ ನೀಡಿದ್ದಾರೆ.
ಪರಿಹಾರದ ಹಣದಲ್ಲಿ ಕಮಿಷನ್ ಪಡೆಯಲಾಗುತ್ತಿದೆ ಎಂಬ ದೂರುಗಳು ಬರುತ್ತಿವೆ. ಕಮಿಷನ್ ಪಡೆಯೋರ ವಿರುದ್ಧ ಕಠಿಣ ಕ್ರಮ ಕೈಗೊಳ್ಳೋದಾಗಿ ತಿಳಿಸಿದ್ದಾರೆ.
ಪ್ರವಾಹದಿಂದ ಮನೆಗಳನ್ನು ಕಳೆದುಕೊಂಡಿರುವ ಕುಟುಂಬಗಳಿಗೆ ಮನೆಯ ನಿರ್ಮಾಣಕ್ಕೆ ಮೊದಲ ಕಂತಿನ ಒಂದು ಲಕ್ಷ ರೂಪಾಯಿ ಹಣವನ್ನು ನೇರವಾಗಿ ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗಿದೆ.
ಈ ಹಣದಲ್ಲಿ ಕೆಲವರು ಕಮಿಷನ್ ಕೇಳುತ್ತಿದ್ದಾರೆ ಎಂಬುದು ಸಹಿಸಲು ಸಾಧ್ಯವಿಲ್ಲ. ಪರಿಹಾರ ಬಿಡುಗಡೆ ವಿಚಾರದಲ್ಲಿ ಮಧ್ಯವರ್ತಿಗಳಿಗೆ ಆಸ್ಪದವೇ ಇರುವುದಿಲ್ಲ ಅಂತ ಡಿಸಿ ಹೇಳಿದ್ದಾರೆ.