ಕೇಂದ್ರ ಸರ್ಕಾರ ಹೊರಡಿಸಿರುವ ಆದೇಶವನ್ನು ಅನುಸರಿಸಿ ರಾಜ್ಯ ಸರ್ಕಾರ ಹೊರಡಿಸಿರುವ ಸೇರ್ಪಡೆ ಆದೇಶದಂತೆ ರಾಮನಗರದಲ್ಲಿ ಯಾವುದೇ ಕಾರಣಕ್ಕೆ ಇದಕ್ಕೆ ಅವಕಾಶ ನೀಡೋದಿಲ್ಲ ಎಂದು ಡಿಸಿ ಹೇಳಿದ್ದಾರೆ.
ರಾಮನಗರ ಜಿಲ್ಲೆಯಾದ್ಯಂತ ಯಾವುದೇ ಕೈಗಾರಿಕೆಗಳನ್ನು ಪ್ರಾರಂಭಿಸುವಂತಿಲ್ಲ ಎಂದು ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ಅವರು ಸ್ಪಷ್ಟ ಪಡಿಸಿದ್ದಾರೆ.
ಬೆಂಗಳೂರು ನಗರದ ಜೆ.ಜೆ.ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ರಾಮನಗರ ಜಿಲ್ಲಾ ಕಾರಾಗೃಹದಲ್ಲಿರಿಸಿದ್ದ ಆರೋಪಿಗಳಲ್ಲಿ ಐದು ಮಂದಿಗೆ ಕೊರೋನಾ ಸೋಂಕು ಇರುವುದು ದೃಢಪಟ್ಟಿದೆ.
ಈ ಹಿನ್ನೆಲೆಯಲ್ಲಿ ರಾಮನಗರ ಜಿಲ್ಲೆಯಲ್ಲಿ 5 ಕಿ.ಮೀ ವ್ಯಾಪ್ತಿ ಪ್ರದೇಶವನ್ನು ಬಫರ್ ಜೋನ್ ಎಂದು ಪರಿಗಣಿಸಲಾಗಿದೆ. ಈ ವ್ಯಾಪ್ತಿಯಲ್ಲಿ ಹಾಲಿ ದೈನಂದಿನ ಅಗತ್ಯ ವಸ್ತುಗಳ ಪೂರೈಸುವ ಅಂಗಡಿಗಳನ್ನು ಹೊರತುಪಡಿಸಿ ಇತರೆ ಯಾವುದೇ ರೀತಿಯ ಅಂಗಡಿ ಮುಂಗ್ಗಟ್ಟುಗಳನ್ನು ತೆರೆಯಲು ಅವಕಾಶವಿರುವುದಿಲ್ಲ ಎಂದಿದ್ದಾರೆ.
ಚನ್ನಪಟ್ಟಣ, ಮಾಗಡಿ ಮತ್ತು ಕನಕಪುರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಮಾಲ್‌ಗಳು ಮತ್ತು ಬೃಹತ್ ಅಂಗಡಿ ಮಳಿಗೆಗಳನ್ನು ಹೊರತುಪಡಿಸಿ Shops and Establishment Act ರಡಿ ನೋಂದಾಯಿಸಲಾದ ನೆರೆಹೊರೆ ಅಂಗಡಿಗಳು, ಒಂಟಿ ಅಂಗಡಿಗಳನ್ನು ಮತ್ತು ವಸತಿ ಸಮುಚ್ಛಾಯದಲ್ಲಿರುವ ಅಂಗಡಿಗಳನ್ನು ತೆರೆಯಬಹುದಾಗಿದೆ ಎಂದಿದ್ದಾರೆ.