SSLC ಪರೀಕ್ಷೆ ಬರೆಯುವರಿಗೆ ಕೊರೊನಾ ಇಲ್ಲ ಎಂದವರು ಯಾರು?
ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯುವ ಮಕ್ಕಳಲ್ಲಿ ಯಾವುದೇ ಕೋವಿಡ್-19 ಪಾಸಿಟಿವ್ ಪ್ರಕರಣ ಇಲ್ಲ.
ವಿದ್ಯಾರ್ಥಿಗಳು ಹಾಗೂ ಪೋಷಕರು ಆತಂಕಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಡಾ. ಕೆ. ರಾಕೇಶ್ ಕುಮಾರ್ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆ ಬರೆಯುವ ಮಕ್ಕಳಲ್ಲಿ ಯಾವುದೇ ಕೋವಿಡ್-19 ಪಾಸಿಟಿವ್ ಪ್ರಕರಣ ಪತ್ತೆಯಾಗಿಲ್ಲ.
ಒಂದು ವೇಳೆ ಪಾಸಿಟಿವ್ ಪ್ರಕರಣ ಕಂಡು ಬಂದರೆ, ಪಾಸಿಟಿವ್ ಅಥವಾ ಪ್ರಾಥಮಿಕ ಸಂಪರ್ಕದಲ್ಲಿದ್ದ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಯಲ್ಲಿ ಪ್ರೆಶ್ ಎಂದು ಪರಿಗಣಿಸಿ ಪರೀಕ್ಷೆ ಬರೆಸುವ ವ್ಯವಸ್ಥೆಯನ್ನು ಮಾಡಿಕೊಂಡಿದ್ದೇವೆ ಎಂದಿದ್ದಾರೆ.