ಐಟಿ/ಬಿಟಿ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಪ್ರಾಸ್ತಾವಿಕ ನುಡಿಗಳನ್ನಾಡಿ, ಕರ್ನಾಟಕವು ಮಾಹಿತಿ ತಂತ್ರಜ್ಞಾನ ರಾಜಧಾನಿ ಮಾತ್ರವಲ್ಲದೇ ಜೈವಿಕ ತಂತ್ರಜ್ಞಾನದ ತವರೂ ಆಗಿದೆ; ಕಿಣ್ವಗಳು (ಎಂನ್ಸೆಮ್ಸ್), ಬಯೋಫಾರ್ಮಾ, ಬಯೋಫಾರ್ಮಸ್ಯೂಟಿಕಲ್, ಸಸ್ಯ ಆನುವಂಶೀಯತೆ, ವಂಶವಾಹಿನಿಗಳ ಅನುಕ್ರಮಣಿಕೆ, ಜೈವಿಕ ಸಂಸ್ಕರಣೆಗೆ ಸಂಬಂಧಿಸಿದ ಆವಿಷ್ಕಾರಗಳಿಗೆ ಬೆಂಗಳೂರು ಪ್ರಮುಖ ಕಾರ್ಯನೆಲೆಯಾಗಿದೆ ಎಂದರು.