ನಾವು ಎಲ್ಲಿ ಪ್ರತಿ ತಿಂಗಳು ಹಣ ಕೊಡ್ತೀವಿ ಅಂತಾ ಹೇಳಿದ್ವಿ: ಡಿಕೆ ಶಿವಕುಮಾರ್‌

Sampriya

ಸೋಮವಾರ, 19 ಮೇ 2025 (16:36 IST)
ಬಳ್ಳಾರಿ: ನೋಡ್ರಿ ನಾವು ತಿಂಗಳು ತಿಂಗಳು ಗೃಹಲಕ್ಷ್ಮಿ ಹಣವನ್ನು ಕೊಡ್ತೀವಿ ಅಂತ ಎಲ್ಲೂ ಹೇಳಿಲ್ಲ ಎನ್ನುವ ಮೂಲಕ ಡಿಸಿಎಂ ಡಿಕೆ ಶಿವಕುಮಾರ್‌ ಅವರು ಉಲ್ಟಾ ಹೊಡೆದಿದ್ದಾರೆ.

ಬಳ್ಳಾರಿಯಲ್ಲಿ ಕಾಂಗ್ರೆಸ್‌ ಸಾಧನಾ ಸಮಾವೇಶ ಬಳಿಕ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು,  ನೋಡ್ರಿ ತಿಂಗಳು ತಿಂಗಳು ಹಣ ಕೊಡ್ತೀವಿ ಅಂತ ನಾವು ಹೇಳಿಲ್ಲ. ನೀವು ಟ್ಯಾಕ್ಸ್‌ ಕಟ್ಟುತ್ತಾ ಇರಬೇಕು.. ನಾವು ದುಡ್ಡು ಕೊಡ್ತಾ ಇರಬೇಕು. ಗುತ್ತಿಗೆದಾರರಿಗೆ ಆಗಲೇ ಹಣ ಬಂದುಬಿಡುತ್ತಾ. 2, 3, 5 ವರ್ಷ ಆಗುತ್ತೆ ಅಲ್ವಾ. ಅದೇ ರೀತಿ ಇದು ಕೂಡಾ ಎನ್ನುವ ಮೂಲಕ ಯೂಟರ್ನ್ ಹೊಡೆದಿದ್ದಾರೆ.

ಇನ್ನೂ ಕಾಂಗ್ರೆಸ್ ಸಾಧನಾ ಸಮಾವೇಶಕ್ಕೆ ವಿಪಕ್ಷಗಳ ಟೀಕೆ ಬಗ್ಗೆ ಪ್ರಶ್ನಿಸಿದ್ದಕ್ಕೆ ಪ್ರತಿಕ್ರಿಯಿಸಿದ ಅವರು, ನಾನೇನು ಹಂಪಿ ಟೂರ್ ಮಾಡೋಕೆ ಬಂದಿದ್ದೇನಾ. ಕುಮಾರಸ್ವಾಮಿ, ಅಶೋಕ್‌ಗೆ ಟೀಕೆ ಮಾಡದೇ ಇರೋಕೆ ಅಗುತ್ತಾ ಅಂತ ತಿರುಗೇಟು ನೀಡಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ