ಬರ್ತಡೇ ಆಚರಿಸಲ್ಲ ಅಂತಾ ಹೇಳಿ ನೆನಪಿನಲ್ಲಿ ಉಳಿದುಕೊಳ್ಳುವ ಹಾಗೇ ದಿನ ಕಳೆದ ಡಿಸಿಎಂ ಡಿಕೆ ಶಿವಕುಮಾರ್‌

Sampriya

ಗುರುವಾರ, 15 ಮೇ 2025 (19:12 IST)
Photo Credit X
ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ ಅವರು ಇಂದು 62ನೇ ಹುಟ್ಟು ಹಬ್ಬವನ್ನು ವಿಶೇಷವಾಗಿ ಆಚರಿಸಿಕೊಂಡಿದ್ದಾರೆ.

ದೇಶಕ್ಕಾಗಿ ಯೋಧರು ಪ್ರಾಣವನ್ನು ಪಣಕ್ಕಿಟ್ಟು ಹೋರಾಡುವ ಸಂದರ್ಭದಲ್ಲಿ ನಾನು ಈ ಬಾರಿ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿಲ್ಲ. ಯಾರೂ ಮನೆ ಹತ್ರ ಆಗಲಿ, ಕಚೇರಿ ಬಳಿ ಬರಬೇಡಿ. ಬರ್ತಡೇ ದಿನ ನಾನು ಮನೆಯಲ್ಲಿ ಇರುವುದಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ಅಭಿಮಾನಿಗಳ ಬಳಿ ಕೇಳಿಕೊಂಡಿದ್ದರು.

ಇದೀಗ ಬರ್ತಡೇ ದಿನವನ್ನು ವಿಶೇಷವಾಗಿ ಫ್ಯಾಮಿಲಿ ಜತೆ ಕಳೆದಿದ್ದಾರೆ.  ಈ ಸಂಬಂಧ ವಿಡಿಯೋವನ್ನು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿದ್ದಾರೆ.

ಈ ವರ್ಷದ ಹುಟ್ಟುಹಬ್ಬವನ್ನು ವಿಶೇಷವಾಗಿ ಕಬಿನಿಯಲ್ಲಿ ಕಾಲ ಕಳೆಯುವ ಮೂಲಕ ಆಚರಿಸಿದೆ. ಪ್ರಕೃತಿಯೊಂದಿಗೆ ಒಂದಾದ ಭಾವ, ಕಬಿನಿಯ ಸೌಂದರ್ಯ, ವನ್ಯಸಂಪತ್ತನ್ನು ಕಣ್ತುಂಬಿಕೊಂಡು, ಪ್ರಶಾಂತವಾದ ಜಗತ್ತಿಗೆ ಕಾಲಿಟ್ಟ ಅನುಭವವಾಯಿತು.

ಈ ವರ್ಷದ ಹುಟ್ಟುಹಬ್ಬವನ್ನು ವಿಶೇಷವಾಗಿ ಕಬಿನಿಯಲ್ಲಿ ಕಾಲ ಕಳೆಯುವ ಮೂಲಕ ಆಚರಿಸಿದೆ. ಪ್ರಕೃತಿಯೊಂದಿಗೆ ಒಂದಾದ ಭಾವ, ಕಬಿನಿಯ ಸೌಂದರ್ಯ, ವನ್ಯಸಂಪತ್ತನ್ನು ಕಣ್ತುಂಬಿಕೊಂಡು, ಪ್ರಶಾಂತವಾದ ಜಗತ್ತಿಗೆ ಕಾಲಿಟ್ಟ ಅನುಭವವಾಯಿತು.

A Special Birthday spent amidst the peace of nature.

In the heart of Kabini, nature spoke in… pic.twitter.com/4bV8d2y645

— DK Shivakumar (@DKShivakumar) May 15, 2025

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ