ಗಂಗೆಯಲ್ಲಿ ಮಿಂದ ತಕ್ಷಣ ಡಿಸಿಎಂ ಡಿಕೆ ಶಿವಕುಮಾರ್‌ ಅವರ ಪಾಪಗಳೆಲ್ಲ ಕಳೆದುಹೋಗುತ್ತಾ

Sampriya

ಮಂಗಳವಾರ, 4 ಫೆಬ್ರವರಿ 2025 (16:21 IST)
ಬೆಂಗಳೂರು: ಗಂಗೆಯಲ್ಲಿ ಮಿಂದ ತಕ್ಷಣ ಡಿಸಿಎಂ ಡಿಕೆ ಶಿವಕುಮಾರ್‌ ಅವರು ಪಾಪಗಳೆಲ್ಲ ಕಳೆದುಹೋಗುತ್ತಾ ಎಂದು ವಿಪಕ್ಷ ನಾಯಕ ಆರ್‌ ಅಶೋಕ್ ಪ್ರಶ್ನೆ ಮಾಡಿದ್ದಾರೆ.

ಉತ್ತರ ಪ್ರದೇಶದ ಪ್ರಯಾಗ್‌ ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಇದೇ ಫೆಬ್ರವರಿ 9 ಮತ್ತು 10 ರಂದು ಭಾಗಿಯಾಗಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಈ ಹಿಂದೆ ಮಹಾಕುಂಭಮೇಳದ ಬಗ್ಗೆ ಎಐಸಿಸಿ ನಾಯಕ ಮಲ್ಲಿಕಾರ್ಜುನ ಖರ್ಗೆ ಟೀಕೆ ಮಾಡಿದ್ದರು. ಇದೀಗ ಡಿಕೆ ಶಿವಕುಮಾರ್ ಅವರ ಮಹಾಕುಂಭಮೇಳದ ಭೇಟಿಯನ್ನು ಮುಂದಿಟ್ಟು ಆರ್‌ ಅಶೋಕ್ ಅವರು ಮಲ್ಲಿಕಾರ್ಜುನ ಖರ್ಗೆ ಅವರನ್ನು ಪ್ರಶ್ನೆ ಮಾಡಿದ್ದಾರೆ.

ಕುಂಭ ಮೇಳದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಪುಣ್ಯಸ್ನಾನ ಮಾಡಿದ ತಕ್ಷಣ ಕರ್ನಾಟಕದಲ್ಲಿ ಬಡತನ ನಿರ್ಮೂಲನೆ ಆಗುತ್ತಾ?

ಹೀಗಂತ ಈಗ ಖರ್ಗೆ ಸಾಹೇಬರು ಪ್ರಶ್ನೆ ಮಾಡಲ್ವಾ ಎಂದಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ