ಎಲ್ಲಾ ಜಿಲ್ಲೆಗಳಲ್ಲಿಯೂ ವಿಜ್ಞಾನ ಕೇಂದ್ರ ನಿರ್ಮಾಣವೆಂದ ಡಿಸಿಎಂ!
ವಿದ್ಯಾರ್ಥಿಗಳಲ್ಲಿ ವಿಜ್ಞಾನದ ಬಗ್ಗೆ ಆಸಕ್ತಿ ಮೂಡಿಸಲು ಎಲ್ಲಾ ಜಿಲ್ಲೆಗಳಲ್ಲೂ ವಿಜ್ಞಾನ ಕೇಂದ್ರ ತೆರೆಯಲು ಸರಕಾರ ಕಾರ್ಯಕ್ರಮ ರೂಪಿಸಿದೆ ಎಂದು ಡಿಸಿಎಂ ಹೇಳಿದ್ದಾರೆ.
ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಈ ಹೇಳಿಕೆ ನೀಡಿದ್ದಾರೆ. ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ಆಯೋಜಿಸಿದ್ದ ಜ್ಞಾನ-ವಿಜ್ಞಾನ-ತಂತ್ರಜ್ಞಾನ ಮೇಳ, 6ನೇ ವಾರ್ಷಿಕ ಪಟ್ಟಾಭಿಷೇಕ ಮಹೋತ್ಸವ ಹಾಗೂ ವಿಜ್ಞಾತಂ ಪ್ರಶಸ್ತಿ ಪ್ರದಾನ ನೆರವೇರಿಸಿ ಮಾತನಾಡಿದರು.
ಜಾಗತಿಕ ಮಟ್ಟದಲ್ಲಿ ಭಾರತ ದೊಡ್ಡ ಮಟ್ಟದ ಸ್ಥಾನಕ್ಕೇರಿದೆ. ಇಂಡಿಯಾ 6ನೇ ಅಣುಶಕ್ತಿ ಕೇಂದ್ರವಾಗಿ ಗುರುತಿಸಿಕೊಂಡಿದೆ. ಮಾನವ ಸಂಪನ್ಮೂಲ ಒದಗಿಸುವ ರಾಷ್ಟ್ರಗಳ ಪೈಕಿ ನಾವು 4ನೇ ಸ್ಥಾನದಲ್ಲಿದ್ದೇವೆ.
ಸ್ಟಾರ್ಟ್‌ಅಪ್‌ನಲ್ಲಿ ಎರಡನೇ ಸ್ಥಾನದಲ್ಲಿ ಕರ್ನಾಟಕ ಇದೆ ಎಂದರು.