ಡಿಸಿಎಂ, ಸಚಿವರು ಬಸ್ ನಲ್ಲಿ ಹೋಗಿದ್ದೆಲ್ಲಿಗೆ?

ಸೋಮವಾರ, 6 ಜನವರಿ 2020 (14:45 IST)
ರಾಜ್ಯದ ಉಪಮುಖ್ಯಮಂತ್ರಿ ಹಾಗೂ ಕೆಲವು ಸಚಿವರು ಬಸ್ ನಲ್ಲಿ ಕುಳಿತು ಸಂಚಾರ ಮಾಡಿದ್ರು.

ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಬೆಳಗಾವಿಯಲ್ಲಿ 9 ನೂತನ ಬಸ್ ಗಳಿಗೆ ಚಾಲನೆ ನೀಡಿದ್ರು.

ಕೇಂದ್ರ ಬಸ್ ನಿಲ್ದಾಣ ಆವರಣದಲ್ಲಿ ನೂತನ ಬಸ್ ಗಳಿಗೆ ಪೂಜೆ ನೆರವೇರಿಸುವ ಮೂಲಕ ಬಸ್ ಸಂಚಾರಕ್ಕೆ ಚಾಲನೆ ನೀಡಿದರು.  ಬಸ್ ನಿಲ್ದಾಣ ಕಾಮಗಾರಿಯ ವೀಕ್ಷಣೆ ಕೈಗೊಂಡರು.

ರೈಲ್ವೆ ಇಲಾಖೆಯ ರಾಜ್ಯ ಸಚಿವ ಸುರೇಶ್ ಅಂಗಡಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಕೆ.ಎಸ್.ಈಶ್ವರಪ್ಪ, ವಿಧಾನ ಪರಿಷತ್ತಿನ  ಸರ್ಕಾರದ ಮುಖ್ಯ ಸಚೇತಕ ಮಹಾಂತೇಶ್ ಕವಟಗಿಮಠ, ಶಾಸಕರು ಬಸ್ ನಲ್ಲಿ ಪ್ರಯಾಣಿಸಿದ್ರು.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ