ಡಿಸಿಎಂ ಹುದ್ದೆಗೆ ಹೆಚ್ಚು ಮಹತ್ವ ಕೊಡಬಾರದು, ಅದು ಸಾಂವಿಧಾನಿಕ ಹುದ್ದೆಯಲ್ಲ: ಟಿ.ಬಿ ಜಯಚಂದ್ರ

ಭಾನುವಾರ, 17 ಸೆಪ್ಟಂಬರ್ 2023 (13:55 IST)
ಬೆಂಗಳೂರು : ಉಪ ಮುಖ್ಯಮಂತ್ರಿ ಹುದ್ದೆಯು ಸಾಂವಿಧಾನಿಕ ಹುದ್ದೆ ಅಲ್ಲ. ಅದಕ್ಕೆ ಹೆಚ್ಚು ಮಹತ್ವ ಕೊಡಬಾರದು ಎಂದು ಮಾಜಿ ಸಚಿವರೂ ಆಗಿರುವ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ ಜಯಚಂದ್ರ ತಿಳಿಸಿದ್ದಾರೆ.
 
3 ಡಿಸಿಎಂ ಹುದ್ದೆ ಸೃಷ್ಟಿ ಮಾಡಬೇಕು ಎಂಬ ಸಚಿವ ರಾಜಣ್ಣ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಸಚಿವ ರಾಜಣ್ಣ ಯಾವ ಹಿನ್ನೆಲೆಯಲ್ಲಿ ಹೇಳಿದ್ದಾರೋ ಗೊತ್ತಿಲ್ಲ. ಪತ್ರ ಬರೆಯುತ್ತೇನೆ ಅಂತ ಹೇಳಿದ್ದಾರೆ. ಅದು ಸಲಹೆ ರೂಪದಲ್ಲಿ ಕೊಟ್ಟಿರಬಹುದು ಎಂದಿದ್ದಾರೆ. 

ಡಿಸಿಎಂ ಹುದ್ದೆಗೆ ಹೆಚ್ಚು ಮಹತ್ವ ಕೊಡಬಾರದು. ಏಕೆಂದರೆ ಅದು ಸಾಂವಿಧಾನಿಕ ಹುದ್ದೆ ಅಲ್ಲ. ಸರ್ಕಾರ ಆಗಿ ನಾವು ನೋಡಬೇಕಾದ ಕೆಲಸ ತುಂಬಾ ಇದೆ. ಗ್ಯಾರಂಟಿ ಯೋಜನೆ ಅನುಷ್ಠಾನ ಮಾಡಬೇಕು. ಹೀಗಾಗಿ ಅದಕ್ಕೆ ಹೇಗೆ ಹಣ ಸಂಗ್ರಹ ಮಾಡಬೇಕು ಅನ್ನೋದರ ಬಗ್ಗೆ ಗಮನಹರಿಸಬೇಕು. ಗ್ಯಾರಂಟಿ ಯೋಜನೆ ಜೊತೆಗೆ ಬೇರೆ ಬೇರೆ ಅಭಿವೃದ್ಧಿ ಕೆಲಸ ಮಾಡುವ ಬಗ್ಗೆಯೂ ಗಮನ ಕೊಡಬೇಕು ಎಂದು ಹೇಳಿದ್ದಾರೆ. 

ಲೋಕಸಭೆ ಚುನಾವಣೆ ಸಮಯದಲ್ಲಿ ಇದಕ್ಕೆ ಪ್ರಾಮುಖ್ಯತೆ ಕೊಡಬಾರದು. ಅವರ ಹೇಳಿಕೆ ರಾಜಕೀಯವಾಗಿ ಪ್ರಸ್ತುತ ಇರುತ್ತದೆ. ಅಂತಿಮವಾಗಿ ಹೈಕಮಾಂಡ್ ಈ ಬಗ್ಗೆ ತೀರ್ಮಾನ ಮಾಡುತ್ತದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ