ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ನಿರಾಶ್ರಿತರ ಮೇಲೆ ಹೆಚ್ಚಿನ ಕಣ್ಣು ಇಡಬೇಕು.
ಕೊರೊನಾ ಸೋಂಕು ಹರಡದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಸೂಚಿಸಿದರು.
ಬೆಂಗಳೂರಿನಲ್ಲಿರುವ ನಿರಾಶ್ರಿತರ ಪರಿಹಾರ ಕೇಂದ್ರಕ್ಕೆ ಭೇಟಿ ಪರಿಶೀಲನೆ ನಡೆಸಿದ ನಂತರ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ಈ ಕೇಂದ್ರದಲ್ಲಿ 672 ನಿರಾಶ್ರಿತರಿದ್ದಾರೆ. ನಿರಾಶ್ರಿತರಿಗೆ ಮಾಸ್ಕ್ ಹಾಗೂ ಸ್ಯಾನಿಟೈಜರ್ ನೀಡುವುದಷ್ಟೇ ಅಲ್ಲದೇ ಅವರು ಬಳಸುವಂತೆ ಮನವರಿಕೆ ಮಾಡಿಕೊಡಬೇಕು.
ಮಾರ್ಚ್ 2 ನೇ ವಾರದಿಂದಲೇ ಈ ನಿರಾಶ್ರಿತರ ಪರಿಹಾರ ಕೇಂದ್ರದಲ್ಲಿ ಲಾಕ್ ಡೌನ್ ಮಾಡಿ, ಪ್ರವೇಶವನ್ನು ನಿಷೇಧಿಸಿ, ಯಾರಿಗೂ ಹೊಸದಾಗಿ ದಾಖಲು ಮಾಡಿಕೊಂಡಿಲ್ಲ. ಅಲ್ಲದೇ ಸಾರ್ವಜನಿಕರಿಗೂ ಪ್ರವೇಶ ನೀಡಿಲ್ಲ. ಮುಂಜಾಗ್ರತಾ ಕ್ರಮಕೈಗೊಂಡಿದ್ದರಿಂದ ಈ ಕೇಂದ್ರದಲ್ಲಿ ಯಾರಿಗೂ ಕೊರೊನಾ ಸೋಂಕು ಕಾಣಿಸಿಕೊಂಡಿಲ್ಲ ಎಂದರು.