ಶಕ್ತಿ ಯೋಜನೆ ಮರುಪರಿಶೀಲನೆಯ ಸುಳಿವು ನೀಡಿದ ಡಿಸಿಎಂ ಶಿವಕುಮಾರ್‌

sampriya

ಗುರುವಾರ, 31 ಅಕ್ಟೋಬರ್ 2024 (10:04 IST)
photo credit X
ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಘೋಷಣೆ ಮಾಡಿದ ರಾಜ್ಯ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಒಂದಾದ ಶಕ್ತಿ ಯೋಜನೆಯನ್ನು ಮರುಪರಿಶೀಲನೆಗೆ ಒಳಪಡಿಸುವ ಸುಳಿವನ್ನು ಡಿಸಿಎಂ ಡಿ.ಕೆ. ಶಿವಕುಮಾರ್‌ ಬುಧವಾರ ನೀಡಿದರು.

ವಿಧಾನಸೌಧದ ಮುಂಭಾಗ ಐರಾವತ ಕ್ಲಬ್‌ಕ್ಲಾಸ್–2.0 ನೂತನ ಬಸ್‌ಗಳನ್ನು ಸಾರ್ವಜನಿಕ ಸೇವೆಗೆ ಬಿಡುಗಡೆ ಮಾಡಿದ ನಂತರ ಮಾತನಾಡಿದ ಅವರು, ಹಲವು ಮಹಿಳೆಯರು ಶಕ್ತಿ ಯೋಜನೆಯನ್ನು ಮರುಪರಿಶೀಲನೆಗೆ ಒಳಪಡಿಸಬೇಕೆಂದು ಸಾಮಾಜಿಕ ಜಾಲತಾಣದಲ್ಲಿ ತಮ್ಮ ಅಭಿಪ್ರಾಯನ್ನು ವ್ಯಕ್ತಪಡಿಸಿದರು.

ಬಸ್‌ನಲ್ಲಿ ತಾವು ಮಹಿಳೆಯರು ಪ್ರಯಾಣಿಸುವಾಗ ಹಣ ಕೊಡಲು ಮುಂದಾದರೂ ನಿರ್ವಾಹಕರು ನಿರಾಕರಿಸುತ್ತಾರೆ. ಆರ್ಥಿಕವಾಗಿ ಅನುಕೂಲ ಸ್ಥಿತಿಯಲ್ಲಿದ್ದು, ಟಿಕೆಟ್‌ ನೀಡಲು ಮುಂದಾಗುತ್ತಿದ್ದಾರೆ. ನಮಗೆ ಉಚಿತ ಪ್ರಯಾಣ ಬೇಡವೆಂದು ಶೇ 5ರಿಂದ 10ರಷ್ಟು ಮಹಿಳೆಯರು ಹೇಳುತ್ತಿದ್ದಾರೆ. ಈ ಕುರಿತು ಪ್ರತ್ಯೇಕ ಸಭೆ ಕರೆದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿಯವರ ಜತೆ ಚರ್ಚಿಸಲಾಗುವುದು ಎಂ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ