ಸಿದ್ದರಾಮಯ್ಯಗೆ ಎಚ್ಚರಿಕೆ ನೀಡಿದ ಡಿಸಿಎಂ
ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಸಿಎಂ ಹಾಗೂ ಹಾಲಿ ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಡಿಸಿಎಂ ಎಚ್ಚರಿಕೆ ನೀಡಿದ್ದಾರೆ.
ವೀರ ಸಾವರಕರ್ ಬಗ್ಗೆ ಸಿದ್ದರಾಮಯ್ಯ ನೀಡಿರೋ ಹೇಳಿಕೆ ವಿಚಾರವಾಗಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಮೊದಲು ಇತಿಹಾಸವನ್ನು ಓದಿ ತಿಳಿದುಕೊಳ್ಳಲಿ. ಅವರು ಹಿರಿಯರಾಗಿದ್ದು ವಾಬ್ದಾರಿಯುತವಾಗಿ ಮಾತನಾಡುವುದನ್ನು ಕಲಿಯಲಿ ಎಂದು ತಿರುಗೇಟು ನೀಡಿದರು.
ಸರ್ಕಾರ ಕೆಕೆಆರ್ ಡಿಬಿಗೆ ಗೋವಿಂದ ಕಾರಜೋಳ ನೇಮಕದ ವಿಚಾರವಾಗಿ ಪತ್ರಕರ್ತರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಅವರು, ಆ ಬಗ್ಗೆ ಸಿಎಂ ಯಡಿಯೂರಪ್ಪ ಅವರಿಗೆ ಕೇಳಬೇಕು ಎಂದಿದ್ದಾರೆ.