ಧರ್ಮಸ್ಥಳದಲ್ಲಿ ಮೃತದೇಹ ಹೂತು ಹಾಕಿದ ಪ್ರಕರಣ: ತನಿಖೆ ಹೊಣೆ ವಿಶೇಷ ತನಿಖಾ ತಂಡದ ಹೆಗಲಿಗೆ

Sampriya

ಭಾನುವಾರ, 20 ಜುಲೈ 2025 (13:52 IST)
Photo Credit X
ಬೆಂಗಳೂರು : ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹ ಹೂತು ಹಾಕಿರುವ ಪ್ರಕರಣದ ಸಂಬಂಧ ವಿಶೇಷ ತನಿಖೆ ನಡೆಸಲು ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ ರಚಿಸಿದೆ.

ಧರ್ಮಸ್ಥಳ ಪೊಲೀಸ್ ಠಾಣೆಗೆ ವ್ಯಕ್ತಿಯೊಬ್ಬ ದೂರು ನೀಡಿ, ಬೆಳ್ತಂಗಡಿ ಕೋರ್ಟ್ ನಲ್ಲಿ ಹೇಳಿಕೆ ನೀಡಿದ ಸಂಬಂಧ ಇದೀಗ ವಿಶೇಷ ತನಿಖಾ ತಂಡಕ್ಕೆ ವರ್ಗಾಯಿಸಿ ಜುಲೈ 19 ರಂದು ಕರ್ನಾಟಕ ಸರ್ಕಾರವು ಆದೇಶಿಸಿರುತ್ತದೆ.  

 ಈ ಬಗ್ಗೆ ಪ್ರಕಟನೆ ಹೊರಡಿಸಿರುವ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ., ಶೀಘ್ರದಲ್ಲೇ ವಿಶೇಷ ತನಿಖಾ ತಂಡವು ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಳ್ಳಲಿದೆ ತೆಗೆದುಕೊಳ್ಳಲಿದೆ ಎಂದವರು ತಿಳಿಸಿದ್ದಾರೆ.

ವಿಶೇಷ ತನಿಖಾ ತಂಡದ ಮುಖ್ಯಸ್ಥರಾಗಿ ಐಪಿಎಸ್ ಪ್ರಣವ ಮೋಹಾಂತಿ ಹಾಗೂ ಸದಸ್ಯರಾಗಿ ಐಪಿಎಸ್‌ಗಳಾದ ಎಂ.ಎನ್.ಅನುಚೇತ್, ಸೌಮ್ಯಲತಾ, ಜಿತೇಂದ್ರ ಕುಮಾರ್ ದಯಾಮ ರವರನ್ನು ಸರ್ಕಾರ ನೇಮಿಸಿದೆ. 

ಧರ್ಮಸ್ಥಳದಲ್ಲಿ ಸ್ವಚ್ಛತಾ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬ ಧರ್ಮಸ್ಥಳದಲ್ಲಿ ನೂರಕ್ಕೂ ಅಧಿಕ ಮೃತದೇಹಗಳನ್ನು ಹೂತು ಹಾಕಿದ್ದೇನೆ ಎಂದು ಪೊಲೀಸರ ಮುಂದೆ ಹೇಳಿಕೆ ನೀಡಿದ್ದ. ಬೆಳ್ತಂಗಡಿ ನ್ಯಾಯಾಲಯದಲ್ಲೂ ಹೇಳಿಕೆಯನ್ನು ದಾಖಲಿಸಿದ್ದ. ಈ ಬಗ್ಗೆ ಎಸ್‌ಐಟಿ ತನಿಖೆಗೆ ಆಗ್ರಹ ಹೆಚ್ಚಾಗಿತ್ತು. 

ಠಾಣಾ ಅ.ಕ್ರ 39/2025ಕ್ಕೆ ಸಂಬಂಧಿಸಿದಂತೆ, ಸದ್ರಿ ಪ್ರಕರಣವನ್ನು ವಿಶೇಷ ತನಿಖಾ ತಂಡಕ್ಕೆ ವರ್ಗಾಯಿಸಿ ದಿನಾಂಕ 19.07.2025 ರಂದು ಮಾನ್ಯ ಕರ್ನಾಟಕ ಸರ್ಕಾರವು ಅದೇಶಿಸಿರುತ್ತದೆ. ಶೀಘ್ರದಲ್ಲೇ ವಿಶೇಷ ತನಿಖಾ ತಂಡವು ಪ್ರಕರಣವನ್ನು ತನ್ನ ಸುಪರ್ದಿಗೆ ತೆಗೆದುಕೊಳ್ಳಲಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ