ಕಲಬುರಗಿಯಲ್ಲಿ ಮೊಸಳೆ ಮೃತದೇಹ ಪತ್ತೆ

ಗುರುವಾರ, 30 ನವೆಂಬರ್ 2023 (19:40 IST)
ಮೊಸಳೆಯೊಂದರ ಮೃತದೇಹ ಪತ್ತೆಯಾಗಿರುವ ಘಟನೆ ಕಲಬುರಗಿ ಜಿಲ್ಲೆಯ ಶಹಬಾದ್ ತಾಲೂಕಿನ ಗೋಳಾ ಗ್ರಾಮದ ಬಳಿಯಿರೋ ಕಾಗಿಣಾ ನದಿಯಲ್ಲಿ ನಡೆದಿದೆ. ಕಾಗಿಣಾ ನದಿಯ ಬ್ರೀಡ್ಜ್ ಕಮ್ ಬ್ಯಾರೇಜ್‌ನಲ್ಲಿ ಸತ್ತ ಮೊಸಳೆ ಪತ್ತೆಯಾಗಿದೆ.

ನದಿಯಲ್ಲಿ ಸತ್ತು ಬಿದ್ದಿದ್ದ ಮೊಸಳೆ ನೋಡಿ ಜನರು ಗಾಬರಿಗೊಂಡಿದ್ದಾರೆ. ಸ್ಥಳಕ್ಕೆ ಬಂದ ಅರಣ್ಯಾಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಬಳಿಕ ಅರಣ್ಯಾಧಿಕಾರಿಗಳು ಮೊಸಳೆ ಮೃತಪಟ್ಟಿರೋದಾಗಿ ತಿಳಿಸಿದ್ದಾರೆ. ಪಶು ವೈದ್ಯಾಧಿಕಾರಿಗಳ ಸಮ್ಮುಖದಲ್ಲಿ ಮೃತ ಮೊಸಳೆ ಮರಣೋತ್ತರ ಪರೀಕ್ಷೆ ನಡೆಸಿ ಅಂತ್ಯಸಂಸ್ಕಾರ ನಡೆಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ