2017ರಲ್ಲಿ ಶ್ರುತಿ ಹಾಗೂ ಅನೀಶ್ ವಿವಾಹವಾಗಿತ್ತು. ದಂಪತಿಗಳು ಮದುವೆಯ ನಂತರ ರಾಜಧನಿಯ ಹೊರವಕಲೆಯ ವೈಟ್‌ಫೀಲ್ಡ್‌ನ ನಲ್ಲೂರುಹಳ್ಳಿ ರಸ್ತೆ ಬಳಿಯ ವಸತಿ ಸಮುಚ್ಚಯದ ಫ್ಲ್ಯಾಟ್‌ನಲ್ಲಿ ವಾಸವಾಗಿದ್ದರು. ಖಾಸಗಿ ಕಂಪನಿ ಉದ್ಯೋಗಿಯಾಗಿರುವ ಅನೀಶ್, ಪ್ರತಿನಿತ್ಯ ಶ್ರುತಿಗೆ ಚಿತ್ರಹಿಂಸೆ ನೀಡುತ್ತಿದ್ದ. ಸಂಬಳದ ಹಣವನ್ನು ತವರು ಮನೆಗೆ ನೀಡುತ್ತೀಯಾ ಎಂದು ಹೇಳಿ ಹಲ್ಲೆ ನಡೆಸುತ್ತಿದ್ದ. ಮದ್ಯಪಾನ ಮಾಡಿ ಮನೆಗೆ ಬಂದು ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದ ಎಂದು ಶ್ರುತಿ ಮನೆಯವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ ಎಂದು ಪೊಲೀಸರು ಪ್ರಕರಣದ ಕುರಿತು ಮಾಹಿತಿ ನೀಡಿದ್ದಾರೆ.
ಭದ್ರತಾ ಸಿಬ್ಬಂದಿ ನೆರವಿನಿಂದ ಬಾಗಿಲು ಮುರಿದ ಕುಟುಂಬಸ್ಥರು:
20 ಮತ್ತು 21ರಂದು ಶ್ರುತಿಗೆ ಸತತವಾಗಿ ಕರೆ ಮಾಡಿದರೂ ಆಕೆ ಸ್ವೀಕರಿಸಿರಲಿಲ್ಲ. ಹೀಗಾಗಿ 22ರ ಬೆಳಿಗ್ಗೆ ಆಕೆಯ ಅಪಾರ್ಟ್‌ಮೆಂಟ್‌ಗೆ ಹೋಗಿದ್ದೆವು. ಮನೆಯ ಬೀಗ ಹಾಕಿತ್ತು. ಕಿಟಕಿಯಿಂದ ಇಣುಕಿ ನೋಡಿದಾಗ ಒಳಗೆ ಯಾರೂ ಕಾಣಲಿಲ್ಲ. ಭದ್ರತಾ ಸಿಬ್ಬಂದಿ ನೆರವಿನಿಂದ ಬಾಲ್ಕನಿಯ ಬಾಗಿಲು ಮುರಿದು ಒಳಗೆ ಹೋದಾಗ ಮಲಗುವ ಕೋಣೆಯಲ್ಲಿ ಶ್ರುತಿಯ ದೇಹ ನೇಣು ಬಿಗಿದ ಸ್ಥಿತಿಯಲ್ಲಿತ್ತು. ಗಂಡನೇ ಆಕೆಯನ್ನು ಕೊಲೆ ಮಾಡಿರುವ ಶಂಕೆ ಇದೆ ಎಂದು ಕುಟುಂಬಸ್ಥರು ದೂರಿನಲ್ಲಿ ವಿವರಿಸಿದ್ದಾರೆ ಎಂದಿದ್ದಾರೆ