ರಕ್ತದ ಮಡುವಿನಲ್ಲಿ ನಿವೃತ್ತ ಪೊಲೀಸ್ ಓಂ ಪ್ರಕಾಶ್‌ ಮೃತದೇಹ ಪತ್ತೆ, ಮನೆಯವರೇ ಮೇಲೆ ಡೌಟ್‌

Sampriya

ಭಾನುವಾರ, 20 ಏಪ್ರಿಲ್ 2025 (18:38 IST)
Photo Credit X
ಬೆಂಗಳೂರು: ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಅವರನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಇಂದು ನಡೆದಿದೆ. ರಾಜ್ಯದ ಪೊಲೀಸ್‌ ಮಹಾನಿರ್ದೇಶಕನ ಬರ್ಬರ ಹತ್ಯೆ ರಾಜ್ಯವನ್ನೇ ಬೆಚ್ಚಿಬೀಳಿಸಿದೆ.

ಇದೀಗ ಸಾವಿನ ಸುತ್ತಾ ಹಲವು ಅನುಮಾನಗಳು ಶುರುವಾಗಿದ್ದು, ಮನೆಯವರೇ ಕೊಲೆ ಮಾಡಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

ಬೆಂಗಳೂರಿನ ಎಚ್ಎಸ್ಆರ್ ಲೇಔಟ್ ನ ಮನೆಯಲ್ಲಿ ರಕ್ತದ ಮಡುವಿನಲ್ಲಿ ಓ ಪ್ರಕಾಶ್ ಅವರ ಮೃತದೇಹ ಪತ್ತೆಯಾಗಿದ್ದು ಇದೊಂದೆ ಕೊಲೆ ಆಗಿದೆ ಎಂದು ವರದಿಯಾಗಿದೆ.

1981ರ ಬ್ಯಾಚ್ ನ ಐಪಿಎಸ್ ಅಧಿಕಾರಿಯಾಗಿದ್ದ 68 ವರ್ಷದ ಓಂ ಪ್ರಕಾಶ್ ಅವರು ಬೆಂಗಳೂರಿನ ಎಚ್ಎಸ್ಆರ್ ಲೇಔಟ್ ನಲ್ಲಿ ವಾಸವಾಗಿದ್ದರು. ರಾಜ್ಯದ 38ನೇ ಡಿಜಿ ಮತ್ತು ಐಜಿಪಿಯಾಗಿದ್ದ ಓಂಪ್ರಕಾಶ್ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸೆಂಟ್ ಜಾನ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.

 ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ದೌಡಾಯಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ