ಸರ್ಕಾರಿ ಗೋಶಾಲೆ ಆರಂಭಕ್ಕೆ ಡೆಡ್ಲೈನ್ : ಪ್ರಭು ಚೌಹಾಣ್

ಬುಧವಾರ, 23 ನವೆಂಬರ್ 2022 (11:17 IST)
ಬೆಂಗಳೂರು : ಎಲ್ಲಾ ಸರ್ಕಾರಿ ಜಿಲ್ಲಾ ಗೋಶಾಲೆಗಳನ್ನು ಡಿಸೆಂಬರ್ ಅಂತ್ಯದೊಳಗೆ ಆರಂಭಿಸುವಂತೆ ಪಶುಸಂಗೋಪನೆ ಇಲಾಖಾ ಅಧಿಕಾರಿಗಳಿಗೆ ಪಶುಸಂಗೋಪನೆ ಸಚಿವ ಪ್ರಭು ಬಿ ಚೌಹಾಣ್ ಗಡುವು ನೀಡಿದರು.

ವಿಕಾಸಸೌಧದ ಸಮ್ಮೇಳನ ಸಭಾಂಗಣದಲ್ಲಿ ಪಶುಸಂಗೋಪನೆ ಇಲಾಖಾ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, ಸರ್ಕಾರಿ ಜಿಲ್ಲಾ ಗೋಶಾಲೆಗಳ ಪ್ರಸ್ತುತ ಸ್ಥಿತಿಗತಿ ಕುರಿತು ಮಾಹಿತಿ ಪಡೆದು ಅಧಿಕಾರಿಗಳ ಕಾರ್ಯವೈಖರಿಗೆ ಸಿಡಿಮಿಡಿಗೊಂಡರು.

ಜಿಲ್ಲೆಗೊಂದು ಸರ್ಕಾರಿ ಗೋಶಾಲೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಜಾಗೃತ ಕೋಶ ವಿಭಾಗದ ಅಪರ ನಿರ್ದೇಶಕ ಡಾ. ಶ್ರೀನಿವಾಸ್ ಅವರು, ಕಾರ್ಯನಿರ್ವಹಿಸುತ್ತಿರುವ 5 ಗೋಶಾಲೆಗಳಲ್ಲಿ ಜಾನುವಾರುಗಳಿಗೆ ಆಶ್ರಯ ನೀಡಲಾಗಿದೆ.

12 ಗೋಶಾಲೆಗಳು ಪೂರ್ಣಗೊಂಡಿವೆ. 8 ಪೂರ್ಣಗೊಳ್ಳುವ ಹಂತದಲ್ಲಿದ್ದು, ಇನ್ನುಳಿದವುಗಳು ನಿರ್ಮಾಣ ಹಂತದಲ್ಲಿವೆ ಎಂದು ಮಾಹಿತಿ ನೀಡಿದರು. ಈ ವೇಳೆ ಗರಂ ಆದ ಸಚಿವರು, ನನಗೆ ಲೆಕ್ಕ ಬೇಡ,

ನಿರ್ಮಾಣ ಕಾಮಗಾರಿ ಮುಂದಿನ ವರ್ಷಕ್ಕೆ ಮುಂದುವರಿಯದೇ ಇದೇ ವರ್ಷದ ಅಂತ್ಯದೊಳಗೆ ಎಲ್ಲಾ ಗೋಶಾಲೆಗಳಲ್ಲಿ ಜಾನುವಾರುಗಳಿಗೆ ಆಶ್ರಯ ನೀಡಬೇಕು ಎಂದು ಅಂತಿಮ ಡೆಡ್ಲೈನ್ ನೀಡಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ