ಬಿಜೆಪಿ ಅಭ್ಯರ್ಥಿಗೆ ಮತ ನೀಡದ ಕಾರಣಕ್ಕೆ ಮಾರಣಾಂತಿಕ ಹಲ್ಲೆ!
ವಿಜಯಪುರ ದರ್ಗಾರ ಜೈಲು ರಸ್ತೆಯಲ್ಲಿ ಈ ಘಟನೆ ನಡೆದಿದೆ. ದೇವಕಾಂತ್ ಬಿಜ್ಜರಗಿ ಹಲ್ಲೆಗೊಳಗಾದ ವ್ಯಕ್ತಿ. ಘಟನೆ ನಡೆದು ಎರಡು ದಿನವಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ವಾರ್ಡ್ ನಂಬರ್ 2ರಲ್ಲಿ ಬಿಜೆಪಿ ಅಭ್ಯರ್ಥಿ ರಾಹುಲ್ ಔರಂಗಾಬಾದ್ ಸೋಲು ಹಿನ್ನೆಲೆಯಲ್ಲಿ ದೇವಕಾಂತ್ ಮೇಲೆ ಹಲ್ಲೆ ನಡೆದಿರುವ ಆರೋಪ ಕೇಳಿ ಬಂದಿದೆ.
ಚುನಾವಣೆಯಲ್ಲಿ ಸೋತ ಬಿಜೆಪಿ ಅಭ್ಯರ್ಥಿ ಹಾಗೂ ಬೆಂಬಲಿಗರು ಸೇರಿ ಕಲ್ಲಿನಿಂದ ಹಲ್ಲೆ ನಡೆಸಿದ್ದಾರೆ ಎಂದು ದೇವಕಾಂತ್ ಆರೋಪಿಸಿದರು.