ಡೆಡ್ಲಿ ಕೊರೋನಾ : ಸ್ವಲ್ಪ ಸಮಾಧಾನದ ವಿಷಯ ಇದು

ಗುರುವಾರ, 25 ಜೂನ್ 2020 (21:08 IST)
ದೇಶದಲ್ಲಿಯೇ ಮಹಾಮಾರಿ ಕೊರೋನಾ ಸೊಂಕಿಗೆ ಮೊದಲ ಮೃತ ಪ್ರಕರಣ ವರದಿಯಿಂದ ಸುದ್ದಿಯಾದ ಜಿಲ್ಲೆಯಲ್ಲಿ ಇದೀಗ ಮತ್ತೆ ಸುದ್ದಿ ಹರಡುತ್ತಿದೆ.

ಕಲಬುರಗಿ ಜಿಲ್ಲೆಯಲ್ಲಿ ಕೊರೋನಾ ಪೀಡಿತರು ತೀವ್ರಗತಿಯಲ್ಲಿ ಚೇತರಿಕೆ ಕಾಣುತ್ತಿದ್ದಾರೆ. ಸೋಂಕಿತರ ಪೈಕಿ ಶೇ. 66 ರಷ್ಟು ಜನ ಗುಣಮುಖರಾಗಿ ಮನೆಗೆ ಮರಳಿದ್ದಾರೆ ಎಂದು ಜಿಲ್ಲಾಧಿಕಾರಿ ಶರತ್ ಬಿ. ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಜೂನ್ 24ರ ವರೆಗೆ ಪತ್ತೆಯಾದ 1254 ಕೊರೋನಾ ಪೀಡಿತರ ಪೈಕಿ 829 ರೋಗಿಗಳು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಗುಣಮುಖರಾದವರ ಪ್ರಮಾಣ ಶೇ.66 ರಷ್ಟಿದೆ.

ಪ್ರಸ್ತುತ 412 ರೋಗಿಗಳು ಸಕ್ರಿಯರಾಗಿ ಚಿಕಿತ್ಸೆ ಪಡೆಯುತ್ತಿದ್ದು, ಇವರ ಪ್ರಮಾಣ ಶೇ.33. ಉಳಿದಂತೆ ಕೋವಿಡ್-19 ಸೋಂಕಿಗೆ 13 ಜನ ನಿಧನ ಹೊಂದಿದ್ದು, ಮರಣ ಪ್ರಮಾಣ ಶೇ.1 ರಷ್ಟು ಮಾತ್ರ. ಸೋಂಕಿಗೆ ಕೊನೆಯುಸಿರೆಳದ 13 ಜನರಲ್ಲಿ 60 ಮತ್ತು ಮೇಲ್ಪಟ್ಟ ಹಾಗೂ 55 ಮತ್ತು ಮೇಲ್ಪಟ್ಟ ವಯಸ್ಸಿನ ತಲಾ 5 ಜನರಿದ್ದಾರೆ.

ಮರಣ ಹೊಂದಿದ 13 ಜನರ ಪೈಕಿ ಬಹುತೇಕರು ಮಾರಣಾಂತಿಕ, ದೀರ್ಘಕಾಲದ ಮತ್ತು ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು ಎಂದಿದ್ದಾರೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ