ಮಂಗಳೂರು: ಕುಡುಪುವಿನಲ್ಲಿ ಈಚೆಗೆ ಗುಂಪು ಹಲ್ಲೆಯಿಂದ ಮೃತಪಟ್ಟ ಪ್ರಕರಣ ಸಂಬಂಧ ಮಂಗಳೂರು ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್, ಹೆಡ್ ಕಾನ್ಸ್‌ಸ್ಟೇಬಲ್ ಹಾಗೂ ಕಾನ್‌ಸ್ಟೇಬಲ್ ಅಮಾನತು ಮಾಡಲಾಗಿದೆ ಎಂದು ಪೊಲೀಸ್ ಕಮಿಷನರ್ ಅನುಪಮ್ ಅಗ್ರವಾಲ್ ತಿಳಿಸಿದ್ದಾರೆ.
ಅಮಾನತುಗೊಂಡ ಪೊಲೀಸರನ್ನು ಮಂಗಳೂರು ಗ್ರಾಮಾಂತರ ಠಾಣೆಯ ಇನ್ಸ್‌ಪೆಕ್ಟರ್ ಶಿವಕುಮಾರ್ ಕೆಆರ್, ಹೆಡ್ ಕಾನ್ಸ್‌ಸ್ಟೇಬಲ್ ಚಂದ್ರ ಪಿ ಹಾಗೂ ಕಾನ್‌ಸ್ಟೇಬಲ್ ಯಲ್ಲಾಲಿಂಗ ಅಮಾನತುಗೊಂಡವರು.
ಏಪ್ರಿಲ್ 27ರಂದಯ ಕುಡುಪುವಿನಲ್ಲಿ ನಡೆದ ಕ್ರಿಕೆಟ್ ಪಂದ್ಯಾಟವನ್ನು ವೀಕ್ಷಿಸಲು ಬಂದ ಕೇರಳದ ವಯನಾಡು ಜಿಲ್ಲೆಯ ಅಶ್ರಫ್ ಎಂಬಾತನ ಮೇಲೆ ಗುಂಪು ಹಲ್ಲೆ ನಡೆದಿದ್ದು. ಈ ಸಂಬಂದ ಕೊಲೆ ಪ್ರಕರಣ ದಾಖಲಿಸಿಕೊಳ್ಳುವ ಬದಲು ಸಂಶಯಾಸ್ಪದ ಸಾವು ಪ್ರಕರಣವನ್ನು ದಾಖಲಿಸಿಕೊಂಡಿದ್ದರು.
ಈ ಪ್ರಕರಣವನ್ನು ಮುಚ್ಚಿಹಾಕುವ ಯತ್ನ ನಡೆದಿತ್ತು ಎಂದು ಅನೇಕ ಸಂಘನೆಗಳು ಆರೋಪಿಸಿದ್ದವು.
ಈ ಪ್ರಕರಣದಲ್ಲಿ ಇದುವರೆಗೆ 20ಆರೋಪಿಗಳನ್ನು ಬಂಧಿಸಲಾಗಿದೆ. ಮೊದಲು ಸಂಶಯಾಸ್ಪದ ಅಸಹಜ ಸಾವು ಪ್ರಕರಣವನ್ನು ಮಾರ್ಪಾಡು ಮಾಡಿ, ಭಾರತೀಯ ನ್ಯಾತ ಸಂಹಿತೆಯ ಸೆಕ್ಷನ್ 103 ಅಡಿ ಗುಂಪು ಹಲ್ಲೆ ಮಾಡಿ ಹತ್ಯೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.