ಬೆಳಗಾವಿಯಲ್ಲಿ 322 ನವಜಾತ ಶಿಶು, 29 ಬಾಣಂತಿಯರ ಸಾವು ಪ್ರಕರಣ: ಸಿಎಂ ರಾಜೀನಾಮೆಗೆ ಆರ್‌ ಅಶೋಕ್‌ ಒತ್ತಾಯ

Sampriya

ಸೋಮವಾರ, 9 ಡಿಸೆಂಬರ್ 2024 (17:01 IST)
ಬೆಂಗಳೂರು: ಬಳ್ಳಾರಿಯಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣ ರಾಜ್ಯದಾದ್ಯಂತ ಸದ್ದು ಮಾಡುತ್ತಿರುವ ಬೆನ್ನಲ್ಲೇ ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ 6 ತಿಂಗಳಿನಲ್ಲಿ 29 ಬಾಣಂತಿಯರು ಹಾಗೂ 322 ನವಜಾತ ಶಿಶು ಸಾವನ್ನಪ್ಪಿರುವ ಆಘಾತಕಾರಿ ಸಂಗತಿ ಬಹಿರಂಗವಾಗಿದೆ.  

ಅದಲ್ಲದೆ ಕಿಮ್ಸ್‌ ಆಸ್ಪತ್ರೆಯಲ್ಲಿ ಜನವರಿಯಿಂದ ಈವರೆಗೆ 33 ಗರ್ಭಿಣಿಯರು ಹಾಗೂ 148 ಶಿಶುಗಳ ಸಾವಾಗಿದೆ ಎಂದು ಕಿಮ್ಸ್ ನಿರ್ದೇಶಕ ಡಾ ಎಸ್‌ಎಫ್‌ ಕಮ್ಮಾರ್ ಹೇಳಿದ್ದಾರೆ.

ಈ ಸಂಬಂಧ ವಿಪಕ್ಷ ನಾಯಕ ಆರ್‌ ಅಶೋಕ್ ಅವರು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿ ಪೋಸ್ಟ್ ಹಾಕಿದ್ದಾರೆ.

ಬಳ್ಳಾರಿಯಲ್ಲಿ ಸಂಭವಿಸುತ್ತಿರುವ ಬಾಣಂತಿ ಮಹಿಳೆಯರ ಸರಣಿ ಸಾವಿನ ಬೆನ್ನಲ್ಲೇ ಈಗ ಬೆಳಗಾವಿಯ ಜಿಲ್ಲಾಸ್ಪತ್ರೆಯಲ್ಲಿ ಕಳೆದ ಒಂದು ವರ್ಷದಿಂದ 322 ನವಜಾತ ಶಿಶುಗಳು, 29 ಬಾಣಂತಿ ಮಹಿಳೆಯರು ಮೃತಪಟ್ಟಿರುವ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ.

ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ನಿರ್ವಹಣೆ ಮಾಡುವಲ್ಲಿ ಈ ಕೊಲೆಗಡುಕ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲವಾಗಿದ್ದು, ಇದರ ನೈತಿಕ ಹೊಣೆ ಹೊತ್ತು ಸಿಎಂ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಬೇಕು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ