ಸಂತಾನಹರಣ ಆಪರೇಷನ್ ಮಾಡಿಸಿಕೊಳ್ಳುತ್ತಿದ್ದ ಮಹಿಳೆ ಸಾವು : ಸಚಿವ ಹೇಳಿದ್ದೇನು?
ಸಂತಾನಹರಣ ಶಸ್ತ್ರಚಿಕಿತ್ಸೆ ವೇಳೆ ಮಹಿಳೆ ಸಾವನ್ನಪ್ಪಿದ್ದಾರೆ.
ಸಂತಾನಹರಣ ಶಸ್ತ್ರಚಿಕಿತ್ಸಾ ವೇಳೆ 30 ವರ್ಷದ ಮಹಿಳೆ ಸಾವನ್ನಪ್ಪಿದ್ದು ಅತ್ಯಂತ ದುರಾದೃಷ್ಟಕರ. ಇದು ಸರ್ವೇ ಸಾಮಾನ್ಯ ಶಸ್ತ್ರಚಿಕಿತ್ಸೆ. ಈ ವೇಳೆ ಸಾವು ಸಂಭವಿಸಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ.
ಯಾವ ಕಾರಣಕ್ಕೆ ಸಾವು ಸಂಭವಿಸಿದೆ ಎಂಬುದು ತನಿಖೆಯಿಂದಷ್ಟೇ ಹೊರಬರಬೇಕು. ಈಗಾಗಲೇ ಇಲಾಖೆ ಕಾರ್ಯದರ್ಶಿಗೆ ತನಿಖೆ ನಡೆಸುವಂತೆ ನಿರ್ದೇಶನ ನೀಡಿದ್ದೇನೆ. ಒಂದು ವೇಳೆ ಶಸ್ತ್ರಚಿಕಿತ್ಸೆಯಲ್ಲಿ ಲೋಪವಾಗಿ ವೈದ್ಯರ ನಿರ್ಲಕ್ಷ್ಯ ಕಂಡು ಬಂದರೆ ಅವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.