ಪ್ರವಾಹದಲ್ಲಿ ಕೊಚ್ಚಿಹೋದ ಯುವಕ ಸಾವು

ಬುಧವಾರ, 7 ಆಗಸ್ಟ್ 2019 (16:16 IST)
ಭೀಕರ ಪ್ರವಾಹಕ್ಕೆ ಯುವಕನೊಬ್ಬ ಕೊಚ್ಚಿಹೋಗಿ ಸಾವನ್ನಪ್ಪಿದ್ದಾನೆ.

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ತೀರ್ಥ ಗ್ರಾಮದಲ್ಲಿ ನೀರಿನ ಪ್ರವಾಹಕ್ಕೆ ಯುವಕ ಬಲಿಯಾಗಿದ್ದಾನೆ.

ನಡು ಗಡ್ಡೆಯಲ್ಲಿ ಸಿಲುಕಿದ ಯುವಕ ಅಲ್ಲಿಂದ ಪಾರಾಗಲು ಹೋಗಿ ನೀರಿನಲ್ಲಿ ಕೊಚ್ಚಿಕೊಂಡು ಹೋಗಿ ಸಾವನ್ನಪ್ಪಿದ್ದಾನೆ.

ಬಸವರಾಜ ಮಾಣಿಕ ಕಾಂಬಳೆ (15) ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾನೆ.

ನದಿಗೆ ಇತರ ಜನರೂ ಜಾರಿ ಬಿದ್ದಿರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಶೋಧ ಕಾರ್ಯ ಮುಂದುವರಿದಿದೆ.
ಅಥಣಿ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಘಟನೆ ಇದಾಗಿದೆ.



ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ