ಪ್ರಧಾನಿ ಸಾವು, ಮತದಾರರಿಗೆ ಬೆದರಿಕೆ ಆರೋಪ: ಶಾಸಕ ಭರಮಗೌಡ ಕಾಗೆಗೆ ಚುನಾವಣೆ ಆಯೋಗದಿಂದ ನೋಟಿಸ್

Sampriya

ಗುರುವಾರ, 2 ಮೇ 2024 (18:25 IST)
Photo Courtesy X
ಚಿಕ್ಕೋಡಿ:‍ ಪ್ರಧಾನಿ ಸಾವು ಹಾಗೂ ಕಾಂಗ್ರೆಸ್‌ಗೆ ಮತ ನೀಡದಿದ್ದರೆ ವಿದ್ಯುತ್‌ ಕಡಿತ ಮಾಡುವ ಹೇಳಿಕೆ ನೀಡಿ ನೀತಿ ಸಂಹಿತೆ ಉಲ್ಲಂಘಿಸಿದ ಶಾಸಕ  ಭರಮಗೌಡ (ರಾಜು) ಕಾಗೆ ಅವರಿಗೆ ಚಿಕ್ಕೊಡಿ ಜಿಲ್ಲಾ ಚುನಾವಣಾಧಿಕಾರಿ ಬುಧವಾರ ನೋಟಿಸ್‌ ನೀಡಿದ್ದಾರೆ.

ತಾವು ನೀಡಿದ ಹೇಳಿಕೆ ಸಂಬಂಧ 24 ಗಂಟೆಯೊಳಗೆ ವಿವರಣೆ ನೀಡುವಂತೆ  ಕಾಗವಾಡ ವಿಧಾನಸಭಾ ಮತಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಮೂಲಕ ನೋಟಿಸ್‌ ಜಾರಿ ಮಾಡಲಾಗಿದೆ ಎಂದು ರಾಹುಲ್‌ ಶಿಂಧೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಲೋಕಸಭೆ ಚುನಾವಣೆ ಹಿನ್ನೆಲೆ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿ ಸತ್ತರೆ ಈ ದೇಶದಲ್ಲಿ ಮುಂದೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ? ಏಕೆ ಮೋದಿ...ಮೋದಿ... ಎಂದು ಕೂಗುತ್ತೀರಿ ಎಂದು ಶಾಸಕ ಭರಮಗೌಡ (ರಾಜು) ಕಾಗೆ ಅವರು ಬಿಜೆಪಿ ವಿರುದ್ಧ ಹರಿಹಾಯ್ದಿದ್ದರು.

ಅದಲ್ಲದೆ ಕಾಂಗ್ರೆಸ್‌ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಅವರಿಗೆ ನಿರೀಕ್ಷಿತ ಮತ ಬರದೇ ಇದ್ದರೆ ನಿಮ್ಮೂರಿನ ವಿದ್ಯುತ್‌ ಕಡಿತಗೊಳಿಸುತ್ತೇನೆ ಎಂದು ಬೆದರಿಕೆ ಹಾಕಿದ ಆರೋಪವು  ಭರಮಗೌಡ ವಿರುದ್ಧ ಕೇಳಿಬಂದಿದೆ. ಇದೀಗ ಈ ಹೇಳಿಕೆ ಸಂಬಂಧ ವಿವರಣೆ ನೀಡುವಂತೆ ಚುನಾವಣೆ ಆಯೋಗ ನೋಟಿಸ್‌ ಜಾರಿ ಮಾಡಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ