ಗುತ್ತಿಗೆದಾರನಿಗೆ ಕೊಲೆ ಬೆದರಿಕೆ: ಬಿಜೆಪಿ ಶಾಸಕ ಮುನಿರತ್ನ ಪೊಲೀಸ್ ವಶಕ್ಕೆ
ಕೋಲಾರದಿಂದ ಆಂಧ್ರದ ಚಿತ್ತೂರು ಕಡೆಗೆ ಹೋಗಲು ಶಾಸಕ ಮುನಿರತ್ನ ಮುಂದಾಗಿದ್ದರು. ಅವರ ಮೊಬೈಲ್ ಲೊಕೇಶನ್ ಟ್ರ್ಯಾಕ್ ಮಾಡಿ ಅವರಿದ್ದ ಸ್ಥಳವನ್ನು ಪತ್ತೆ ಹಚ್ಚಿ, ವಶಕ್ಕೆ ಪಡೆದಿದ್ದಾರೆ. ಮುನಿರತ್ನ ಅವರನ್ನು ವಶಕ್ಕೆ ಪಡೆದು ಬೆಂಗಳೂರಿಗೆ ಕರೆತರಲಾಗುತ್ತಿದೆ ಎನ್ನುವ ಮಾಹಿತಿಯೂ ಲಭ್ಯವಾಗಿದೆ.
ಇನ್ನೂ ಈ ಪ್ರಕರಣ ಸಂಬಂಧ ವಶಕ್ಕೂ ಮುನ್ನಾ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಮುನಿರತ್ನ ಅವರು 'ಆ ಆಡಿಯೋ ನನ್ನದೇ ಎಂದು ಸಾಬೀತಾದ್ರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ. ಇದೆಲ್ಲಾ ಕಾಂಗ್ರೆಸ್ ಕುತಂತ್ರ ಎಂದು ಆರೋಪಿಸಿದ್ದರು.