ಅ.11ರೊಳಗೆ ಶಾಲೆ ಆರಂಭದ ಬಗ್ಗೆ ನಿರ್ಧಾರ- ಸಚಿವ ಸುರೇಶ್ ಕುಮಾರ್

ಗುರುವಾರ, 1 ಅಕ್ಟೋಬರ್ 2020 (09:48 IST)
ಬೆಂಗಳೂರು : ಅ.11ರೊಳಗೆ ಶಾಲೆ ಆರಂಭದ ಬಗ್ಗೆ ನಿರ್ಧಾರ ಮಾಡಿರುವುದಾಗಿ  ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ  ಮಾತನಾಡಿದ ಅವರು, ಇಂದು ಅಧಿಕಾರಿಗಳು, ತಜ್ಞರ ಜೊತೆ ಸಭೆ ನಡೆಸುತ್ತೇವೆ. ಪೋಷಕರ ಅಭಿಪ್ರಾಯ ಕೂಡ ಕೇಳಿದ್ದೇವೆ. ಶಾಲೆ ಆರಂಭಿಸುವ ವಿಚಾರದಲ್ಲಿ ಗೊಂದಲ ಬೇಡ. ಮಕ್ಕಳ ಸುರಕ್ಷತೆ ನಮ್ಮ ಮೊದಲ ಆದ್ಯತೆ. ಸಭೆಯಲ್ಲಿ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.  

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ