ಶಾಸಕ ಮುನಿರತ್ನ ವಿರುದ್ಧ ಮಹಿಳಾ ಆಯೋಗಕ್ಕೆ ದೂರಿಗೆ ನಿರ್ಧಾರ: ಸೌಮ್ಯ ರೆಡ್ಡಿ

Sampriya

ಶನಿವಾರ, 14 ಸೆಪ್ಟಂಬರ್ 2024 (19:31 IST)
Photo Courtesy X
ಬೆಂಗಳೂರು:  ಬಿಜೆಪಿ ಶಾಸಕ ಮುನಿರತ್ನ ಅವರು ಮಹಿಳೆಯರ ಬಗ್ಗೆ ಲಘುವಾಗಿ ಮಾತನಾಡಿರುವ ಬಗ್ಗೆ ಕೇಳಿದಾಗ, "ಶಾಸಕರಾಗಿರಲಿ ಅಥವಾ ಪಂಚಾಯ್ತಿ ಸದಸ್ಯರೇ ಆಗಿರಲಿ ಮಹಿಳೆಯರ ಬಗ್ಗೆ ಲಘುವಾಗಿ ಮಾತನಾಡುವುದು ಸರಿಯಲ್ಲ ಎಂದು ಕಾಂಗ್ರೆಸ್ ಮಹಿಳಾ ಅಧ್ಯಕ್ಷೆ ಸೌಮ್ಯರೆಡ್ಡಿ ಹೇಳಿದರು.

ಇಂದು ಸುದ್ದಿಗೋಷ್ಠಿಯಲ್ಲಿ ಮುನಿರತ್ನ ವೈರಲ್ ಆಡಿಯೋ ಸಂಬಂಧ ಪ್ರತಿಕ್ರಿಯಿಸಿದ ಅವರು,  ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ನಾನು ಈ ಪ್ರಕರಣದ ವಿರುದ್ಧ ಮಹಿಳಾ ಆಯೋಗಕ್ಕೆ ದೂರು ನೀಡುತ್ತೇನೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು. ಮಹಿಳೆಯರು, ಜಾತಿಯ ವಿಚಾರವಾಗಿ ಈ ರೀತಿ ಕೀಳಾಗಿ ಮಾತನಾಡುವುದು ಸರಿಯಲ್ಲ ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಕೆಪಿಸಿಸಿ ಉಪಾಧ್ಯಕ್ಷರು ಹಾಗೂ ಮಹಿಳಾ ಕಾಂಗ್ರೆಸ್ ಉಸ್ತುವಾರಿಗಳಾದ ನಾರಾಯಣ ಸ್ವಾಮಿ, ಮಹಿಳಾ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಮಂಜುಳಾ ನಾಯ್ಡು ಹಾಗೂ ಕೆಪಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ರತ್ನಪ್ರಭಾ ಅವರು ಉಪಸ್ಥಿತರಿದ್ದರು.

ಗುತ್ತಿಗೆದಾರ ಚಲುವರಾಜು ಅವರಿಗೆ ಶಾಸಕ ಮುನಿರತ್ನ ಜೀವ ಬೆದರಿಕೆ ಹಾಕಿ ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಕೋಲಾರದಲ್ಲಿ ಅವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಇದೀಗ ಮುನಿರತ್ನ ಅವರನ್ನು ಪೊಲೀಸರು ಬೆಂಗಳೂರಿಗೆ ಕರೆತರುತ್ತಿದ್ದಾಋಎ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ