ಮಂಡ್ಯ ಜಿಲ್ಲೆಯ ಶಾಸಕರು ಮತ್ತು ಸಂಸದರೊಂದಿಗೆ ಸಭೆ ನಡೆಸಿದ ನಂತರ ಮಾತನಾಡಿದ ಅವರು, ನಾಲೆಗಳಿಗೆ ಹರಿಬಿಟ್ಟ ನೀರಿನಿಂದ ಭತ್ತ, ಕಬ್ಬು ಬೆಳೆಯಬೇಡಿ. ಇದಕ್ಕೆ ನೀರು ಕೊಡಲು ಆಗುವುದಿಲ್ಲ. ಮಳೆಯಾಧಾರಿತ ಬೆಳೆಗಳನ್ನು ಬೆಳೆಯಿರಿ ಎಂದು ರೈತರಿಗೆ ಸಲಹೆ ನೀಡಿದ್ದಾರೆ.
ಕಬಿನಿ, ಕೆರ್‌ಎಸ್, ಹಾರಂಗಿ, ಹೇಮಾವತಿ ಜಲಾಶಯಗಳಿಂದ ಕಾವೇರಿ ಕಣಿವೆಯ ರೈತರ ನಾಲೆಗಳಿಗೆ ನೀರು ಹರಿದುಬಿಡಲಾಗುತ್ತದೆ. ಇದರಿಂದ ಅಂತರ್ಜಲ ಮಟ್ಟ ಹೆಚ್ಚಳವಾಗುತ್ತದೆ ಎಂದು ತಿಳಿಸಿದ್ದಾರೆ.