ಬೆಂಗಳೂರು-ವಿಕಾಸಸೌಧದ 123 ಕೊಠಡಿಯಲ್ಲಿ ವೆಟ್ ಲ್ಯಾಂಟ್ ಅಥಾರಿಟಿಯ ಅಂತರ್ಜಾಲ ತಾಣಕ್ಕೆ ಚಾಲನೆ ನೀಡಿ ಮಾತನಾಡಿದ ಈಶ್ವರ್ ಖಂಡ್ರೆ ಅವರು, ರಾಜ್ಯದ ರಾಜಧಾನಿಯಲ್ಲಿ ಜನಸಂಖ್ಯೆ ಹೆಚ್ಚಳವಾಗುತ್ತಿದ್ದು, ಅದಕ್ಕೆ ಅನುಗುಣವಾಗಿ ನೀರು ಪೂರೈಕೆ ಕಷ್ಟಸಾಧ್ಯವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಜಲಮೂಲಗಳ ರಕ್ಷಣೆ ಮತ್ತು ನೀರಿನ ಮರುಬಳಕೆಗೆ ಆದ್ಯತೆ ನೀಡುವ ಅಗತ್ಯವಿದೆ ಎಂದು ಪ್ರತಿಪಾದಿಸಿದರು.
ಬೆಂಗಳೂರು ನಗರದ ಬೃಹತ್ ಕಟ್ಟಡ ಸಮುಚ್ಚಯಗಳ ತ್ಯಾಜ್ಯ ನೀರನ್ನು ಸಂಸ್ಕರಿಸಿ, ಶುದ್ಧೀಕರಿಸಿ ಅದನ್ನು ಪುನರ್ಬಳಕೆಗಾಗಿ ಮಾರಾಟ ಮಾಡಲು ಅವಕಾಶ ನೀಡುವ ಕುರಿತಂತೆ ಮಾನದಂಡಗಳನ್ನು ರೂಪಿಸಿ 1 ವಾರದೊಳಗೆ ಸರ್ಕಾರಿ ಆದೇಶ ಹೊರಡಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.
ಬಹುಮಹಡಿ ಕಟ್ಟಡಗಳಲ್ಲಿ ಉತ್ಪತ್ತಿಯಾಗುವ ತ್ಯಾಜ್ಯ ಜಲವನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಆ ನೀರನ್ನು ಹತ್ತಿರದ ಕೆರೆಗಳಿಗೆ ಕೊಳವೆಯ ಮೂಲಕ ಹರಿಸಿದರೆ ಕೆರೆಗಳಲ್ಲಿ ನೀರೂ ಇರುತ್ತದೆ ಜೊತೆಗೆ ಅಂತರ್ಜಲ ಮಟ್ಟವೂ ಹೆಚ್ಚುತ್ತದೆ. ಈ ಕುರಿತಂತೆ ಇಂದು ತಮ್ಮ ಕಚೇರಿಯಲ್ಲಿ ಬಿಬಿಎಂಪಿ, ಬಿಡಿಎ, ನಗರಾಭಿವೃದ್ಧಿ ಇಲಾಖೆ, ಪರಿಸರ ಇಲಾಖೆಯ ಅಧಿಕಾರಿಗಳು ಮತ್ತು ಕಟ್ಟಡ ಸಮುಚ್ಛಯಗಳ ನಿವಾಸಿಗಳ ಸಂಘದ ಪ್ರತಿನಿಧಿಗಳು ಹಾಗೂ ಬಾಧ್ಯಸ್ಥರೊಂದಿಗೆ ನಡೆದ ಸಭೆಯಲ್ಲಿ ಸೂಚಿಸಲಾಗಿದೆ ಎಂದು ತಮಾಡಲಾಗುವುದು ಇಂದು ಬಿಡುಗಡೆ ಮಾಡಲಾದ ಅಂತರ್ಜಾಲ ತಾಣದಲ್ಲಿ ಸಾರ್ವಜನಿಕರಿಗೆ ಜೌಗು ಪ್ರದೇಶ ಘೋಷಣೆಯಿಂದ ಆಗುವ ಪ್ರಯೋಜನಗಳ ಬಗ್ಗೆ, ಕಾಯಿದೆ, ನಿಯಮ ನಿಬಂಧನೆಗಳ ಕುರಿತಂತೆ ಮಾಹಿತಿ ನೀಡುವುದರ ಜೊತೆಗೆ ಜೌಗು ಭೂಮಿಯಲ್ಲಿ ತ್ಯಾಜ್ಯ ಸುರಿಯದಂತೆ ಜಾಗೃತಿ ಮೂಡಿಸುವ ಕಾರ್ಯ ಮಾಡಲಾಗುವುದು ಎಂದು ಈಶ್ವರ್ ಖಂಡ್ರೆ ಹೇಳಿದ್ದರು.