ಬೆಂಗಳೂರು : ಎಸ್ಸಿ ಸಮುದಾಯಕ್ಕೆ ಶೇ. 15 ರಿಂದ 17ಕ್ಕೆ, ಎಸ್ಟಿ ಸಮುದಾಯಕ್ಕೆ ಶೇ. 3 ರಿಂದ 7ಕ್ಕೆ, ಅಲ್ಪಸಂಖ್ಯಾತರಿಗೆ ಶೇ. 4ರ ಮರುಸ್ಥಾಪನೆ, ಲಿಂಗಾಯತ,ಒಕ್ಕಲಿಗ ಮತ್ತಿತರ ಸಮುದಾಯಗಳ ಆಶೋತ್ತರಗಳನ್ನು ಈಡೇರಿಸಲು ಮೀಸಲಾತಿಯನ್ನು ಶೇ. 50ರಿಂದ 75ರವರೆಗೆ ಹೆಚ್ಚಿಸಲು ಸೂಕ್ತ ಕ್ರಮ ಕೈಗೊಳ್ಳುತ್ತೇವೆ.
ಇದರ ಜೊತೆಗೆ ಭಜರಂಗ ದಳವನ್ನು ನಿಷೇಧಿಸುತ್ತೇವೆ ಎಂದು ಕಾಂಗ್ರೆಸ್ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದೆ. ರಾಜ್ಯ ವಿಧಾನಸಭೆ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿಯಿದೆ. ಈ ಹಿನ್ನೆಲೆಯಲ್ಲಿ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಣಾಳಿಕೆ ಬಿಡುಗಡೆಗೊಳಿಸಿದರು.
ಕಾರ್ಯಕ್ರಮದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್,ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ,ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ ಕೆ ಹರಿಪ್ರಸಾದ್, ಪ್ರಣಾಳಿಕೆ ಸಮಿತಿ ಅಧ್ಯಕ್ಷ ಡಾ ಜಿ ಪರಮೇಶ್ವರ್ ಸೇರಿ ಹಲವರು ಭಾಗಿಯಾಗಿದ್ದರು.