ಚೆನ್ನೈ, ತಿರುವಳ್ಳೂರು, ಕಾಂಚೀಪುರಂ, ರಾಣಿಪೇಟ್, ದಿಂಡುಗಲ್, ಪುದುಕೊಟ್ಟೈ, ತೇಣಿ, ವೆಲ್ಲೂರು, ಅರಿಯಲ್ಲೂರು, ನಾಗಪಟ್ಟಣಂ, ವಿಲ್ಲುಪುರ, ತಿರುವಾರೂರ್, ಮೈಲಾಡುಧುರೈ, ಕಲ್ಲಕುರಿಚಿ, ಕಡಲೂರು, ವಿಲ್ಲಿಪುರಂ, ತಂಜಾವೂರು ಮತ್ತು ಧರ್ಮಪುರಿಯಲ್ಲಿ ಶಾಲಾ- ಕಾಲೇಜುಗಳಿಗೆ ಗುರುವಾರ ರಜೆ ಘೋಷಿಸಲಾಗಿದೆ.
ತಮಿಳುನಾಡಿನಲ್ಲಿ 800ಕ್ಕೂ ಹೆಚ್ಚು ಜನರನ್ನು ಚೆನ್ನೈನ ಪರಿಹಾರ ಶಿಬಿರಗಳಿಗೆ ಶಿಫ್ಟ್ ಮಾಡಲಾಗಿದೆ. ಚೆನ್ನೈನ 16ಕ್ಕೂ ಹೆಚ್ಚು ಏರಿಯಾದ ರಸ್ತೆಗಳು ಜಲಾವೃತವಾಗಿದ್ದು, ಚೆನ್ನೈನಲ್ಲಿ ಹೆಚ್ಚಿನ ಮಳೆಯಾಗುವ ನಿರೀಕ್ಷೆಯಿರುವುದರಿಂದ ಸ್ಥಳೀಯರಿಗೆ ಸುರಕ್ಷಿತ ಪ್ರದೇಶಗಳಲ್ಲಿರಲು ಎಚ್ಚರಿಕೆ ನೀಡಲಾಗಿದೆ.
ಇಂದು ಮತ್ತು ನಾಳೆ ಮಳೆಯು ಆಂಧ್ರಪ್ರದೇಶದ ದಕ್ಷಿಣ ಭಾಗ ಮತ್ತು ತಮಿಳುನಾಡು ಕರಾವಳಿಯನ್ನು ತಲುಪಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ ಮೂರ್ನಾಲ್ಕು ದಿನಗಳಲ್ಲಿ ಆಂಧ್ರಪ್ರದೇಶ, ಪುದುಚೇರಿ, ಮಹಾರಾಷ್ಟ್ರ ಮತ್ತು ಕೇರಳದಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ತಮಿಳುನಾಡು ಮಾತ್ರವಲ್ಲ, ಪುದುಚೇರಿ ಹಾಗೂ ಕರ್ನಾಟಕದ ದಕ್ಷಿಣ ಒಳನಾಡು ಪ್ರದೇಶದಲ್ಲೂ ಮುಂದಿನ 5 ದಿನ ಅಲ್ಲಲ್ಲಿ ಚದುರಿದಂತೆ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.