ಶಿವಕುಮಾರ ಶ್ರೀಗಳಿಗೆ ಮರಣೋತ್ತರ ಭಾರತರತ್ನ ಘೋಷಿಸಿ

geetha

ಶನಿವಾರ, 3 ಫೆಬ್ರವರಿ 2024 (17:18 IST)
ಬೆಂಗಳೂರು :ಬಾಗೂರು ಚನ್ನಕೇಶವ ದೇವಸ್ಥಾನದೊಳಗೆ ಈಶ್ವರಾನಂದ ಸ್ವಾಮೀಜಿ ಅವರನ್ನು ಬಿಟ್ಟಿಲ್ಲ ಎಂಬ ವಿಷಯಕ್ಕೆ ಪ್ರತಿಕ್ರಿಯೆ ನೀಡಿ ಗೊತ್ತಿಲ್ಲದ ವಿಚಾರದ ಬಗ್ಗೆ ಹೇಗೆ ಪ್ರತಿಕ್ರಿಯೆ ನೀಡುವುದು ಎಂದು ನುಡಿದ ಸಿಎಂ ಸಿದ್ದರಾಮಯ್ಯ, ನಗರೋತ್ಥಾನ ಯೋಜನೆಯಡಿ ಕಾಮಗಾರಿಯ ಬಿಲ್ ಪಾಸು ಮಾಡಲು ಅಧಿಕಾರಿಗಳು ಸತಾಯಿಸುತ್ತಿರುವ ಬಗ್ಗೆ ದೂರು ನೀಡಿದರೆ ತನಿಖೆ ಕೈಗೊಂಡು ಕ್ರಮ ವಹಿಸಲಾಗುವುದು ಎಂದರು.
 
ಅಡ್ವಾಣಿಯವರಿಗೆ ಭಾರತ ರತ್ನ ದೊರೆತಿರುವ ಬಗ್ಗೆ ಮಾತನಾಡಿ ಕೊಡಲಿ, ಬೇಡ ಎಂದು ನಾವು ಹೇಳಿಲ್ಲ. ನಾನು ತುಮಕೂರು ಸಿದ್ಧಗಂಗಸ್ವಾಮಿಗಳಿಗೆ ಕೊಡಬೇಕು ಎಂದು ತಿಳಿಸಿ ಪತ್ರ ಬರೆದಿದ್ದೆ ಎಂದು ಸಿಎಂ ಸಿದ್ದರಾಮಯ್ಯ  ಈ ಕುರಿತು ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ