ಚಿನ್ನ, ಬೆಳ್ಳಿ ದರದಲ್ಲಿ ಇಳಿಕೆ; ಆಭರಣ ಖರೀದಿಗಾಗಿ ಯೋಚಿಸುತ್ತಿದ್ದರೆ ಇಂದಿನ ಬೆಲೆ ವಿವರ ಇಲ್ಲಿದೆ

ಶನಿವಾರ, 30 ಅಕ್ಟೋಬರ್ 2021 (20:49 IST)
ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 44,850 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,48,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 1,000 ರೂಪಾಯಿ ಇಳಿಕೆ ಆಗಿದೆ.
ಬೆಂಗಳೂರು: ಸಾಮಾನ್ಯವಾಗಿ ಚಿನ್ನಾಭರಣ ಖರೀದಿಸಬೇಕು ಎಂಬ ಆಸೆ ಎಲ್ಲರಲ್ಲಿಯೂ ಇರುತ್ತದೆ.
ದೊಡ್ಡ ಮೌಲ್ಯದ ಚಿನ್ನ ಖರೀದಿಸುವ ಸಲುವಾಗಿ ಹಲವು ವರ್ಷಗಳಿಂದ ಕೂಡಿಟ್ಟ ಹಣವನ್ನೆಲ್ಲಾ ವ್ಯಯಿಸುತ್ತೇವೆ. ಆದ್ದರಿಂದ ಚಿನ್ನ, ಬೆಳ್ಳಿ ದರ ಇಳಿಕೆಯತ್ತ ಸಾಗಿದ್ದಾಗ ಆಭರಣ ಕೊಳ್ಳೋಣ ಎಂಬ ಆಸೆಯೂ ತಪ್ಪಲ್ಲ. ಹಾಗಿರುವಾಗ ಇಂದು ಶನಿವಾರ ಅಕ್ಟೋಬರ್ 30 ಚಿನ್ನ, ಬೆಳ್ಳಿ ದರ ಎಷ್ಟಿದೆ? ನೀವು ಆಸೆ ಪಟ್ಟಿದ್ದ ಚಿನ್ನದ ಆಭರಣ ಕೊಳ್ಳಲು ಇದು ಸುಸಮಯವೇ ಎಂಬುವುದರ ಕುರಿತಾಗಿ ಯೋಚಿಸಲು ಇಂದಿನ ದರ ವಿವರ ಪರಿಶೀಲಿಸಿ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ದರ
ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 44,850 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,48,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 1,000 ರೂಪಾಯಿ ಇಳಿಕೆ ಆಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 48,930 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,89,300 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 1,100 ರೂಪಾಯಿ ಇಳಿಕೆಯಾಗಿದೆ. ಇನ್ನು ಬೆಳ್ಳಿ ದರದಲ್ಲಿಯೂ ಸಹ ಇಳಿಕೆ ಆಗಿದ್ದು, ಕೆಜಿ ಬೆಳ್ಳಿ ಬೆಲೆ 64,600 ರೂಪಾಯಿ ದಾಖಲಾಗಿದೆ. ಸುಮಾರು 400 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ.
ಚೆನ್ನೈನಲ್ಲಿ ಚಿನ್ನ, ಬೆಳ್ಳಿ ದರ
ಚೆನ್ನೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,120 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,51,200 ರೂಪಾಯಿ ನಿಗದಿಯಾಗಿದೆ. ಸುಮಾರು 1,300 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,220 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,92,200 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 1,400 ರೂಪಾಯಿಯಷ್ಟು ಇಳಿಕೆಯಾಗಿದೆ. ಅದೇ ರೀತಿ ಬೆಳ್ಳಿ ಬೆಲೆಯಲ್ಲಿ ಇಳಿಕೆ ಕಂಡು ಬಂದಿದ್ದು ಕೆಜಿ ಬೆಳ್ಳಿ ಬೆಲೆಯಲ್ಲಿ 300 ರೂಪಾಯಿಯಷ್ಟು ಇಳಿಕೆಯಾಗಿದೆ. ಆ ಬಳಿಕ ಕೆಜಿ ಬೆಳ್ಳಿ ಬೆಲೆ 68,800 ರೂಪಾಯಿ ದಾಖಲಾಗಿದೆ.
ದೆಹಲಿಯಲ್ಲಿ ಚಿನ್ನ, ಬೆಳ್ಳಿ ದರ
ದೆಹಲಿಯಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 47,000 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,70,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 1,000 ರೂಪಾಯಿ ಇಳಿಕೆಯಾಗಿದೆ. ಇನ್ನು, 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 51,270 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 5,12,700 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 1,100 ರೂಪಾಯಿ ಇಳಿಕೆ ಕಂಡಿದೆ. ಇನ್ನು ಕೆಜಿ ಬೆಳ್ಳಿಗೆ 64,600 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 400 ರೂಪಾಯಿ ಇಳಿಕೆ ಕಂಡಿದೆ.
ಮುಂಬೈನಲ್ಲಿ ಚಿನ್ನ, ಬೆಳ್ಳಿ ದರ
ಮುಂಬೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 47,050 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,70,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ ಯಾವುದೇ ಬದಲಾವಣೆ ಇಲ್ಲ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 48,050 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,80,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ ಯಾವುದೇ ಬದಲಾವಣೆ ಇಲ್ಲ. ಕೆಜಿ ಬೆಳ್ಳಿ ಬೆಲೆ 64,600 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 400 ರೂಪಾಯಿ ಇಳಿಕೆ ಕಂಡು ಬಂದಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ