ರಾಜ್ಯದಲ್ಲಿ ಇಳಿಕೆಯಾದ ಮಳೆಯ ಪ್ರಮಾಣ
ರಾಜ್ಯದಲ್ಲಿ ಮಳೆ ಕಡಿಮೆಯಾಗುತ್ತಿದ್ದು, ಚಳಿ ಹೆಚ್ಚಾಗುತ್ತಿದೆ. ಕರ್ನಾಟಕದ ಅನೇಕ ಜಿಲ್ಲೆಗಳಲ್ಲಿ ಈಗಾಗಲೇ ದಟ್ಟವಾದ ಮಂಜು ಆವರಿಸಿಕೊಳ್ಳಲಾರಂಭಿಸಿದೆ. ಬಯಲು ಪ್ರದೇಶಗಳಲ್ಲಿಯೂ ತಾಪಮಾನ ಕನಿಷ್ಠ ಮಟ್ಟಕ್ಕೆ ಇಳಿಕೆಯಾಗುತ್ತಿದೆ. ಇನ್ನು ಹವಾಮಾನ ತಜ್ಞರ ಅನ್ವಯ ಇಂದು ಬಹುತೇಕ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಮೋಡ ಕವಿದ ವಾತಾವರಣ ಮುಂದುವರಿಯಲಿದೆ . ರಾಜ್ಯದಲ್ಲಿ ಮಳೆ ಪ್ರಮಾಣ ಗಣನೀಯವಾಗಿ ಇಳಿಕೆಯಾಗಿದ್ದು, ನಿಧಾನವಾಗಿ ಚಳಿ ಹೆಚ್ಚಲಾರಂಭಿಸಿದೆ. ಅನೇಕ ಕಡೆ ಬೆಳ್ಳಂ ಬೆಳಗ್ಗೆ ದಟ್ಟವಾದ ಮಂಜು ಕವಿದ ವಾತಾವರಣ ಕಾಣ ಸಿಗುತ್ತದೆ.ಬೆಂಗಳೂರಿನಲ್ಲಿ ಇಂದು ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ಇರಲಿದೆ. ಇನ್ನು ಕೆಲ ದಿನಗಳ ವರೆಗೂ ಕೂಡ ಇದೇ ರೀತಿ ಚಳಿ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ .