ಹಿಂದೂ ಕಾರ್ಯಕರ್ತ ದೀಪಕ್ ರಾವ್ ಕೊಲೆ ಮಾಡಿರುವ ಕೊಲೆಗಾರರನ್ನು ಮಟ್ಟ ಹಾಕುತ್ತೇವೆ. ಎಷ್ಟೇ ಪ್ರಭಾವಿಗಳಾಗಿದ್ದರೂ ಸರ್ಕಾರ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಿದೆ ಎಂದು ಸಚಿವ ಯು.ಟಿ.ಖಾದರ್ ಹೇಳಿದ್ದಾರೆ.
ಮಂಗಳೂರಿನಲ್ಲಿ ಮಾತನಾಡಿದ ಅವರು, ಕೊಲೆ ಪ್ರಕರಣಗಳಲ್ಲಿ ರಾಜಕೀಯ ಮಾಡುವುದು ಸಮಂಜಸವಲ್ಲ. ಎಲ್ಲ ರಾಜಕೀಯ ಪಕ್ಷಗಳು ಒಟ್ಟಾಗಿ ಸಮಸ್ಯೆಯನ್ನು ಬಗೆಹರಿಸಬೇಕು. ಪ್ರಕರಣದ ತನಿಖೆಗೆ ಎಲ್ಲ ಸಹಕಾರ ಕೊಡುತ್ತೇವೆ. ನಿಷ್ಪಕ್ಷಪಾತ ತನಿಖೆ ನಡೆದು ಸತ್ಯಾಂಶ ಹೊರಬರಲಿದೆ. ತಪ್ಪಿತಸ್ಥರಿಗೆ ಶಿಕ್ಷೆಯಾಗಲಿದೆ ಎಂದಿದ್ದಾರೆ.
ಇಲಿಯಾಸ್ ಜೊತೆಗೆ ಊಟ ಮಾಡಿದನೆಂದು ಅಪಪ್ರಚಾರ ಮಾಡುವುದು ಸರಿಯಲ್ಲ. ಎಲ್ಲದರಲ್ಲೂ ರಾಜಕೀಯ ಮಾಡುವುದು ಖಂಡನೀಯ. ನನ್ನ ಮನೆಯವರು ತಪ್ಪು ಮಾಡಿದರೂ ನಾನು ಕ್ಷಮಿಸುವುದಿಲ್ಲ ಎಂದು ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.