‘ಆ ಕೆಲಸ ಮಾಡಿದ ಪೊಲೀಸರಿಗೆ ಧಿಕ್ಕಾರ ಧಿಕ್ಕಾರ’
ದೆಹಲಿಯಲ್ಲಿ ಪೊಲೀಸರು ವಿದ್ಯಾರ್ಥಿಗಳ ಮೇಲೆ ನಡೆಸಿದ ಗುಂಡಿನ ದಾಳಿಯನ್ನು ವಿರೋಧಿಸಿ ಧಿಕ್ಕಾರ ಕೂಗಲಾಗಿದೆ.
ಆ ವೇಳೆ ಕಿಡಿಗೇಡಿಗಳು ಮಾಡಿದ ಗಲಿಬಿಲಿಯಿಂದ ವಿದ್ಯಾರ್ಥಿಗಳ ಮೇಲೆ ಪೊಲೀಸರು ಗೋಲಿಬಾರ್ ನಡೆಸಿದ ಪರಿಣಾಮ ವಿದ್ಯಾರ್ಥಿಗಳು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಇದು ವಿದ್ಯಾರ್ಥಿಗಳ ಚಳುವಳಿಯಲ್ಲಿ ಕರಾಳ ದಿನವಾಗಿದೆ. ಅದಕ್ಕಾಗಿ ಈ ದಾಳಿಗೆ ಹೊಣೆಗಾರರಾಗಿರುವ ಪೊಲೀಸ್ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪೊಲೀಸರ ವಿರುದ್ಧ ವಿದ್ಯಾರ್ಥಿಗಳು ಮತ್ತು ಎಐಡಿಎಸ್ಓ ಸಂಘಟಕರು ಘೋಷಣೆ ಕೂಗಿ ಆಕ್ರೋಶ ಹೊರ ಹಾಕಿದರು.