ರೋಗ ಬಾಧೆ ಹಾವಳಿ ಬಗ್ಗೆ ಕೇಂದ್ರಕ್ಕೆ ನಿಯೋಗ : ಆರಗ ಜ್ಞಾನೇಂದ್ರ

ಬುಧವಾರ, 19 ಅಕ್ಟೋಬರ್ 2022 (10:44 IST)
ಬೆಂಗಳೂರು : ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕರಾವಳಿ ಭಾಗದಲ್ಲಿ ರೈತ ಸಮುದಾಯದ ಜೀವನಾಡಿಯಾದ ಅಡಿಕೆ ಬೆಳೆ ಎಲೆ ಚುಕ್ಕೆ ರೋಗದಿಂದ  ನಲುಗಿದ್ದು,

ನಿಯಂತ್ರಣ ಬಗ್ಗೆ ಕೇಂದ್ರ ಸರ್ಕಾರದ ಗಮನ ಸೆಳೆಯಲು ನಾಳೆ ದೆಹಲಿಗೆ ನಿಯೋಗವೊಂದನ್ನು ಕೊಂಡೊಯ್ಯಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಸಚಿವರು, ಎಲೆ ಚುಕ್ಕೆ ರೋಗವು ಇಡೀ ಮಲೆನಾಡು ಭಾಗದ ಅಡಿಕೆ ತೋಟಗಳಲ್ಲಿ ವ್ಯಾಪಕವಾಗಿ ಹಬ್ಬಿದ್ದು, ಅಡಿಕೆ ಬೆಳೆ ಸಂಪೂರ್ಣವಾಗಿ ನಾಶವಾಗುವ ಅಪಾಯಕ್ಕೆ ತುತ್ತಾಗಿದೆ.

ಅಡಿಕೆ ಬೆಳೆಯನ್ನು ಉಳಿಸಿ, ಬೆಳೆಗಾರರ ರಕ್ಷಣೆಗೆ ಬರಬೇಕಾದ ತುರ್ತು ಅಗತ್ಯವಿದ್ದು, ತಕ್ಷಣ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಹಾಗೂ ಇತರರನ್ನು ಭೇಟಿಯಾಗಿ ಚರ್ಚಿಸಲಾಗುವುದು ಎಂದು ಹೇಳಿದ್ದಾರೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ