ವಿಶ್ವವಿದ್ಯಾಲಯದಲ್ಲಿ ಮೃತ ಪಟ್ಟ ವಿದ್ಯಾರ್ಥಿಗೆ ಪರಿಹಾರ ನೀಡುವಂತೆ ಒತ್ತಾಯ

ಮಂಗಳವಾರ, 11 ಅಕ್ಟೋಬರ್ 2022 (19:43 IST)
ಬೆಂಗಳೂರುವಿಶ್ವವಿದ್ಯಾನಿಲಯ ವಿದ್ಯಾರ್ಥಿನಿ ಅಪಘಾತ ಪ್ರಕರಣ ಸಂಬಂಧ ವಿದ್ಯಾರ್ಥಿಗಳ ಪ್ರತಿಭಟನೆ ಮುಂದುವರೆದಿದೆ ಗಂಭೀರ ಸ್ಥಿತಿಯಲ್ಲಿ ಇರುವ ವಿದ್ಯಾರ್ಥಿನಿಗೆ1.5 ಕೋಟಿ ರೂ.ಪರಿಹಾರ ನೀಡಬೇಕು.ಸ್ಥಳಕ್ಕೆ ಕೂಡಲೇ ಸಿಎಂ ಮತ್ತು ಶಿಕ್ಷಣ ಸಚಿವರು ಆಗಮಿಸುವಂತೆ ಪ್ರತಿಭಟನಾನಿರತ ವಿದ್ಯಾರ್ಥಿಗಳು ಪಟ್ಟು ಹಿಡಿದಿದ್ದಾರೆ.ಬಸ್ ಇಳಿಯುವಾಗ ಆಯತಪ್ಪಿ ಬಿದ್ದ ಬೆಂಗಳೂರು ವಿಶ್ವವಿದ್ಯಾನಿಯಲದ ವಿದ್ಯಾರ್ಥಿನಿ ಶಿಲ್ಪಶ್ರೀ (22) ಎಂಬುವವರ ಮೇಲೆ ಬಿಎಂಟಿಸಿ ಬಸ್ ಹರಿದ ಪರಿಣಾಮ ವಿದ್ಯಾರ್ಥಿನಿಯ ಸ್ಥಿತಿ ಗಂಭೀರವಾಗಿದೆ. ತೀವ್ರ ರಕ್ತಸ್ರಾವವಾಗಿದೆ. ಈಗಾಗಲೇ ಎರಡು ಶಸ್ತ್ರಚಿಕಿತ್ಸೆ ನೀಡಿರುವ ವೈದ್ಯರು ಇನ್ನೂ ಎರಡರಿಂದ ಮೂರು ಶಸ್ತ್ರ ಚಿಕಿತ್ಸೆ ಮಾಡಬೇಕು ಎಂದು ಹೇಳಿದ್ದಾರೆ ಎಂದು ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.
ಗಂಭೀರ ಸ್ಥಿತಿಯಲ್ಲಿದ್ದು ಸಾವು ಬದುಕಿನ ನಡುವೆ ಹೋರಾಡುತ್ತಿರುವ ವಿದ್ಯಾರ್ಥಿನಿ ಸೂಕ್ತ ಪರಿಹಾರ ವ್ಯವಸ್ಥೆ ಮಾಡಬೇಕು. ಅದಕ್ಕಾಗಿ ಶಿಕ್ಷಣ ಸಚಿವರು ಹಾಗೂ ಸಾರಿಗೆ ಸಚಿವರು ಸ್ಥಳಕ್ಕೆ ಬರಬೇಕು. ಅಲ್ಲಿಯವರೆಗೂ ಹೋರಾಟ ಮುಂದುವರಿಯಲಿದೆ ಎಂದು ಪಟ್ಟು ಹಿಡಿದಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ