ರಾಜ್ಯದಲ್ಲಿ ಹೆಚ್ಚುತ್ತಿರುವ ಡೆಂಗ್ಯೂ ಪ್ರಕರಣಗಳು
ದಿನೇ ದಿನೇ ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿದೆ.ರಾಜ್ಯದಲ್ಲಿ ಈವರೆಗೂ 4 ಸಾವಿರಕ್ಕೂ ಹೆಚ್ಚು ಪ್ರಕರಣಗಳು ಧೃಡಪಟ್ಟಿದೆ.ಬಿಸಿಲು ಮಳೆಯಿಂದಾಗಿ ಪ್ರಕರಣಗಳಲ್ಲಿ ದಿಢೀರ್ ಏರಿಕೆಯಾಗಿದೆ.ಕಳೆದ 20 ದಿನಗಳಲ್ಲಿ 1,330 ಮಂದಿಗೆ ಡೆಂಗ್ಯೂ ದೃಢಪಟ್ಟಿದೆ.ರಾಜ್ಯದಲ್ಲಿ ಈ ವರ್ಷ 4,053 ಡೆಂಗಿ ಪ್ರಕರಣಗಳು ವರದಿಯಾಗಿದೆ.ಬೆಂಗಳೂರಿನಲ್ಲೇ ಅತಿ ಹೆಚ್ಚು ಪ್ರಕರಣಗಳು ದಾಖಲಾಗಿದ್ದು,ಬೆಂಗಳೂರಿನಲ್ಲಿ ಈವರೆಗೆ 2,078 ಡೆಂಗ್ಯೂ ಪ್ರಕರಣಗಳು ವರದಿಯಾಗಿದೆ.