ರಾಜ್ಯದಲ್ಲಿ ಹೆಚ್ಚುತ್ತಿದೆ ಡೆಂಗ್ಯೂ ಪ್ರಕರಣ, ಎಚ್ಚರ ತಪ್ಪಿದರೆ ಆಪತ್ತು ಗ್ಯಾರಂಟಿ

Sampriya

ಶುಕ್ರವಾರ, 28 ಜೂನ್ 2024 (18:12 IST)
Photo Courtesy X
ಬೆಂಗಳೂರು: ಮಳೆಯಾಗುತ್ತಿದ್ದ ಹಾಗೇ ರಾಜ್ಯದಲ್ಲಿ ಡೆಂಗ್ಯೂ ಪ್ರಕರಣದ ಸಂಖ್ಯೆಯೂ ಜಾಸ್ತಿಯಾಗುತ್ತಿದ್ದು, ಇದುವರೆಗೆ ರಾಜ್ಯದಲ್ಲಿ 6000ಕ್ಕೂ ಡೆಂಗ್ಯೂ ಪ್ರಕರಣ ದಾಖಲಾಗಿದೆ. ಇನ್ನೂ ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಈ ಬಾರೀ ಡೆಂಗ್ಯೂ ಪ್ರಕರಣ ಹೆಚ್ಚಿದೆ.

ರಾಜ್ಯದ ಎಲ್ಲೆ ಕಡೆಯೂ ಪತ್ತೆಯಾಗುತ್ತಿರುವ ಡೆಂಗ್ಯೂ ಪ್ರಕರಣವನ್ನು ಆರಂಭದಲ್ಲೇ ಪತ್ತೆ ಹಚ್ಚಿ ಅದಕ್ಕೆ ಸೂಕ್ತ ಚಿಕಿತ್ಸೆ ಪಡೆದುಕೊಳ್ಳುವುದು ಅತ್ಯಗತ್ಯವಾಗಿದೆ. ಇಲ್ಲದಿದ್ದರೆ ಅಪಾಯ ಎದುರಾಗುವ ಸಾಧ್ಯತೆ ಹೆಚ್ಚಿದೆ.

ಏಡಿಸ್ ಹೆಣ್ಣು ಸೊಳ್ಳೆಯಿಂದ ಹರಡುವ ವೈರಸ್ ಇದಾಗಿದ್ದು, ಸೊಳ್ಳೆ ಕಚ್ಚಿದ ನಾಲ್ಕಾರು ದಿನಗಳ ನಂತರ ರೋಗದ ಲಕ್ಷಣಗಳು ಕಾಣಿಸಿಕೊಳ್ಳಲು ಶುರುವಾಗುತ್ತದೆ. ಇನ್ನೂ ಜ್ವರದ ಆರಂಭದಲ್ಲೇ ಸೂಕ್ತ ಚಿಕಿತ್ಸೆ ಪಡೆದರೆ ಯಾವುದೇ ತೊಂದರೆಯಿಲ್ಲ. ಒಂದು ವೇಳೆ ಲಕ್ಷಣಗಳು ಪತ್ತೆ ಹಚ್ಚುವಲ್ಲಿ ನಿರ್ಲಕ್ಷಿಸಿದರೆ ಮನುಷ್ಯನ ರಕ್ತದಲ್ಲಿ ಪ್ಲೇಟ್‌ಲೆಟ್‌ಗಳು ಕುಸಿದು ಜೀವಕ್ಕೆ ಅಪಾಯವಾಗುವ ಸಾಧ್ಯತೆ ಹೆಚ್ಚಿದೆ.

ಲಕ್ಷಣಗಳು: ಇನ್ನೂ ಈ ಡೆಂಗ್ಯೂನ ಸಾಮಾನ್ಯ ಲಕ್ಷಣ ಏನೆಂದರೆ ತೀವ್ರ ಜ್ವರ, ಕಣ್ಣುಗಳ ಹಿಂದೆ ನೋವು, ಸ್ನಾಯು, ಕೀಲು ಮತ್ತು ಮೂಳೆಗಳಲ್ಲಿ ವಿಪರೀತ ನೋವು, ಅತೀವ ತಲೆನೋವು, ಮೈಮೇಲೆ ದದ್ದುಗಳು, ಮೂಗು ಅಥವಾ ದಂತದಲ್ಲಿ ಸ್ವಲ್ಪ ರಕ್ತಸ್ರಾವ, ವಾಂತಿ ಇತ್ಯಾದಿಗಳು ಕಾಣಿಸಿಕೊಳ್ಳಬಹುದು.

ದೊಡ್ಡ ಮಟ್ಟದ ಅಪಾಯ ಎದುರಾಗುವುದಕ್ಕಿಂತ ಮುಂಚೆ ಎಚ್ಚೆತ್ತು ಮುನ್ನೆಚ್ಚರಿಕೆ ಕ್ರಮ ವಹಿಸಿಕೊಳ್ಳಬೇಕು. ಸಂಜೆ ವೇಳೆ ಸೊಳ್ಳೆ ಕಚ್ಚದಂತೆ ಎಚ್ಚರಿಕೆ ವಹಿಸಬೇಕು. ಮನೆ ಸುತ್ತಾ ಮುತ್ತಾ ನೀರು ಶೇಖರಣೆಯಾಗದಂತೆ ನೋಡಿಕೊಳ್ಳಬೇಕು. ಕಿಟಕಿಗಳಿಗೆ ಸೊಳ್ಳೆ ಪರದೆ ಹಾಕಿ ಮನೆಯೊಳಗೆ ಸೊಳ್ಳೆ ಎಂಟ್ರಿಯಾಗದಂತೆ ಎಚ್ಚರ ವಹಿಸಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ