ರಾಜ್ಯದಲ್ಲಿ ಕೊರೊನಾ ಬೆನ್ನಲ್ಲೇ ಡೆಂಗಿ ಪ್ರಕರಣಗಳು ಹೆಚ್ಚಳ -291 ಕೇಸ್ ಪತ್ತೆ!
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಬೆನ್ನಲ್ಲೇ ಡೆಂಗಿ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿದ್ದು, ಕಳೆದ ೊಂದು ವಾರದಲ್ಲಿ 291 ಡೆಂಗಿ ಪ್ರಕರಣಗಳು ದೃಢಪಟ್ಟಿವೆ.ರಾಜ್ಯದ ಹಲವು ಜಿಲ್ಲೆಗಳಲ್ಲಿ ಡೆಂಗಿ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿದ್ದು, ಕಳೆದ ಒಂದು ವಾರದಲ್ಲಿ 291 ಡೆಂಗಿ ಪ್ರಕರಣಗಳು ದೃಢಪಟ್ಟಿವೆ. ಈ ಮೂಲಕ ರಾಜ್ಯದಲ್ಲಿ ಡೆಂಗಿ ಪ್ರಕರಣಗಳ ಸಂಖ್ಯೆ 3,386ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.ಬೆಂಗಳೂರಿನಲ್ಲಿ ಅತೀ ಹೆಚ್ಚು ಪ್ರಕರಣಗಳು ದೃಢಪಟ್ಟಿದ್ದು, 575 ಮಂದಿ ಡೆಂಗಿ ಜ್ವರ ಪ್ರಕರಣಗಳು ಪತ್ತೆಯಾಗಿವೆ. ರಾಜ್ಯದಲ್ಲಿ ಈವರೆಗೆ 1,117 ಚಿಕೂನ್‌ಗುನ್ಯಾ ಪ್ರಕರಣಗಳು ದೃಢಪಟ್ಟಿವೆ. ಕಳೆದೊಂದು ವಾರದಲ್ಲಿ 110 ಮಂದಿ ಚಿಕೂನ್ ಗುನ್ಯಾ ಜ್ವರಕ್ಕೆ ಒಳಗಾಗಿದ್ದಾರೆ.