ಬೆಂಗಳೂರಿನಲ್ಲಿ ಉಲ್ಬಣಗೊಂಡ ಡೆಂಗ್ಯೂ ರೋಗ, 7 ಜನ ಸಾವು

ಶುಕ್ರವಾರ, 8 ಸೆಪ್ಟಂಬರ್ 2023 (20:21 IST)
ಬೆಂಗಳೂರಿನಲ್ಲಿ ಡೆಂಗ್ಯೂ ರೋಗ ಉಲ್ಬಣಗೊಂಡಿದ್ದು, ಜನರಲ್ಲಿ ಆತಂಕ ಶುರುವಾಗಿದೆ. ಶಂಕಿತ ಡೆಂಗ್ಯೂ ರೋಗದಿಂದ ಕಳೆದ ಮೂರು ತಿಂಗಳಲ್ಲಿ ನಗರದಲ್ಲಿ ಏಳು ಜನ ಮೃತಪಟ್ಟಿದ್ದಾರೆ. ಕಳೆದ ಮೂರು ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಸಾವು ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಳೆದ ಒಂದು ತಿಂಗಳಿನಿಂದ ನಗರದಲ್ಲಿ ಡೆಂಗ್ಯೂ ರೋಗ ಆತಂಕಕಾರಿಯಾಗಿ ಏರಿಕೆ ಕಂಡಿದೆ. BBMP ಅಧಿಕಾರಿಗಳ ಪ್ರಕಾರ, ನಗರದಲ್ಲಿ ಈ ವರ್ಷ ಇಲ್ಲಿಯವರೆಗೆ 5,000 ಡೆಂಗ್ಯೂ ರೋಗ ಪ್ರಕರಣಗಳು ವರದಿಯಾಗಿವೆ. ಆಗಸ್ಟ್‌ನಲ್ಲಿ 2,374 ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿವೆ. ಡೆಂಗ್ಯೂ ಪ್ರಕರಣಗಳ ನಿಯಂತ್ರಣ ಕುರಿತು ಬಿಬಿಪಿಎಂ ಅಧಿಕಾರಿಗಳ ಜೊತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಸಭೆ ನಡೆಸಿ ಸೆಪ್ಟೆಂಬರ್ನಲ್ಲಿ ಅತಿ ಹೆಚ್ಚು ಮಳೆಯಾಗಲಿದೆ. ಈ ವೇಳೆ ಡೆಂಗ್ಯೂ ರೋಗ ಉಲ್ಬಣಗೊಳ್ಳದಂತೆ ನೋಡಿಕೊಳ್ಳಿ ಎಂದು ಸೂಚನೆ ನೀಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ